ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಫರ್ನಿಚರ್ ಶಾಪ್ನಲ್ಲಿ ಆಕಸ್ಮಿಕ ಬೆಂಕಿಯಿಂದ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರಿನ ವಿಜ್ಞಾನ ನಗರದಲ್ಲಿ ಈ ಒಂದು ಅಗ್ನಿ ದುರಂತ ಸಂಭವಿಸಿದೆ.ಆದರೆ ಅದೃಷ್ಟಪಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಹೌದು ಬೆಂಗಳೂರಿನ ವಿಜ್ಞಾನ ನಗರದ ಬಸ್ ನಿಲ್ದಾಣದ ಬಳಿ ಇರುವ ಫರ್ನಿಚರ್ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ ಅಂಗಡಿ ಪೂರ್ತಿ ಬೆಂಕಿಗೆ ಆಹುತಿಯಾಗಿದೆ. ಶಾಪ್ ಕ್ಲೋಸ್ ಮಾಡಿದ ಬಳಿಕ ಈ ಒಂದು ಬೆಂಕಿ ಅವಘಡ ಸಂಭವಿಸಿದೆ. ಅದೃಷ್ಟಪಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆ ಕುರಿತಂತೆ ಭೈಯಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.