ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಸರ್ಕಾರವು ಒಂದೇ ದಿನದಲ್ಲಿ ಯೂ ಟರ್ನ್ ಹೊಡೆದಿದೆ. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವಂತ ವಿಧೇಯಕಕ್ಕೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ.
ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.
ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು ಅಂತ ತಿಳಿಸಿದ್ದಾರೆ.
ಅಲ್ಲದೇ ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂಬುದಾಗಿ ಹೇಳಿದ್ದಾರೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಅವರ ಸರ್ಕಾರವು ಒಂದೇ ದಿನದಲ್ಲಿ ಯು ಟರ್ನ್ ಹೊಡೆದಿದೆ.
ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.
ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು.
— Siddaramaiah (@siddaramaiah) July 17, 2024