ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ದಲ್ಲಿ ನಡೆದ ಅಕ್ರಮ ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರ ಇಡಿ ಕಸ್ಟಡಿ ಅವಧಿ ಇಂದು ಅಂತ್ಯವಾಗಿದ್ದು ಇಡಿ ಅಧಿಕಾರಿಗಳು ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಚಿವ ಬಿ ನಾಗೇಂದ್ರ ಅವರ ಇಡಿ ಕಚಡಿ ಅಂತ್ಯವಾಗಿದ್ದು, ಇಂದು ಇಡಿ ಅಧಿಕಾರಿಗಳು ಅವರನ್ನು ಕೋರ್ಟಿಗೆ ಹಾಜರುಪಡಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಯ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳ ಹಿಂದೆ ನಾಗೇಂದ್ರರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. 6 ದಿನಗಳಿಂದ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ವಿಚಾರಣೆ ನಡೆಸಿತ್ತು. ವಿಚಾರಣೆಯ ವೇಳೆ ನಾಗೇಂದ್ರ ಅವರು ಸಮರ್ಪಕವಾಗಿ ಉತ್ತರ ನೀಡದ ಕಾರಣ ಇಂದು ಮತ್ತೆ ಇಡಿ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ನಿನ್ನೆ ನಾಗೇಂದ್ರ ಅವರ ಪತ್ನಿ ಮಂಜುಳ ಅವರನ್ನು ಕೂಡ ಇಡಿ ಅಧಿಕಾರಿಗಳು ಕಚೇರಿಗೆ ಕರೆತಂದು ವಿಚಾರಣೆ ನಡೆಸಿದ್ದರು.