ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ಪೊಲೀಸರು ಬಿವೈ ವಿಜಯೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆಯಿತು.
ಬೆಂಗಳೂರಿನ ಫ್ರೀಡಂ ಪಾರ್ಕ್ ನಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಸಂದರ್ಭದಲ್ಲಿ ಬಿ ವೈ ವಿಜಯೇಂದ್ರ ಅವರು ಬ್ಯಾರಿಕೇಡ್ ಹತ್ತಿ ಹೋಗಲು ಪ್ರಯತ್ನಿಸಿದಾಗ ಬಿ ವೈ ವಿಜಯೇಂದ್ರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಈ ಒಂದು ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕರು, ಸಾವಿರಾರು ಕಾರ್ಯಕರ್ತರು, ಮುಖಂಡರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಈ ವೇಳೆ ರಸ್ತೆಗೆ ಅಡ್ಡಲಾಗಿ ಬ್ಯಾರಿ ಕೇಡುಗಳನ್ನು ಅಳವಡಿಕೆ ಮಾಡಲಾಗಿತ್ತು. ಬ್ಯಾರಿಕೆಡ್ ಹತ್ತಿ ಹೋಗಲು ಬಿವೈ ವಿಜಯೇಂದ್ರ ಯತ್ನಿಸಿದರು. ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರನ್ನು ಖಾಕಿ ವಶಕ್ಕೆ ಪಡೆದುಕೊಂಡಿದೆ.