ಬೆಂಗಳೂರು: 56 ಸಾವಿರ ಕೋಟಿಯನ್ನು ಬಜೆಟ್‍ನಲ್ಲಿ ಗ್ಯಾರಂಟಿಗಾಗಿ ಇಟ್ಟಿದ್ದಾಗಿ ಹೇಳಿದ ಕಾಂಗ್ರೆಸ್ಸಿಗರು ದಲಿತರ ಹಣವನ್ನು ದಲಿತರಿಗೇ ನೀಡಿಲ್ಲ. 25 ಸಾವಿರಕ್ಕೂ ಹೆಚ್ಚು ಕೋಟಿ ದಲಿತರ ಹಣವನ್ನು ಲೂಟಿ ಮಾಡಿದ್ದೀರಲ್ಲಾ? ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಸಿದ್ದರಾಮಯ್ಯ ಅವರನ್ನು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.
ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನವನದ ಬಳಿ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು, ಅನೇಕ ಜನಪರ ಕಾರ್ಯಕ್ರಮಗಳನ್ನು ನಮ್ಮ ಬಿಜೆಪಿ ಸರಕಾರ ಕೊಟ್ಟಿತ್ತು. ಮೋಸದ-ಆಕರ್ಷಣೆಯ ಗ್ಯಾರಂಟಿಗಳನ್ನು ಮುಂದಿಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವು ಇವತ್ತು ದಲಿತರ ಹಣವನ್ನು ದುರುಪಯೋಗ ಮಾಡಿಕೊಂಡಿದೆ. 56 ಸಾವಿರ ಕೋಟಿಯನ್ನು ಬಜೆಟ್‍ನಲ್ಲಿ ಗ್ಯಾರಂಟಿಗಾಗಿ ಇಟ್ಟಿದ್ದಾಗಿ ಹೇಳಿದ ಕಾಂಗ್ರೆಸ್ಸಿಗರು ದಲಿತರ ಹಣವನ್ನು ದಲಿತರಿಗೇ ನೀಡಿಲ್ಲ. 25 ಸಾವಿರಕ್ಕೂ ಹೆಚ್ಚು ಕೋಟಿ ದಲಿತರ ಹಣವನ್ನು ಲೂಟಿ ಮಾಡಿದ್ದೀರಲ್ಲಾ? ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸಿದರು.
ಇದು ಲೂಟಿಕೋರರ ಸರಕಾರ. ಇದರ ವಿರುದ್ಧ ರಾಷ್ಟ್ರೀಯ ಎಸ್‍ಟಿ ಕಮಿಷನ್ ಕೂಡ ನೋಟಿಸ್ ಕೊಟ್ಟಿದೆ. ಸಿದ್ದರಾಮಯ್ಯ ತಂತ್ರಗಾರಿಕೆ ಚೆನ್ನಾಗಿ ಮಾಡುತ್ತಾರೆ. ದಲಿತ ಸಮುದಾಯಕ್ಕೆ ಖುಷಿ ಆಗುವಂತೆ ನಟನೆ ಮಾಡುತ್ತಾರೆ ಎಂದು ಟೀಕಿಸಿದರು. ದಲಿತರ ಹಣವನ್ನು ನೇರವಾಗಿ ಕಸಿಯುವ ತಾಕತ್ತಿದ್ದರೆ ಅದು ಕಾಂಗ್ರೆಸ್ಸಿಗರಿಗೆ ಮಾತ್ರ. ಅಂಥ ತಾಕತ್ತು ಬಿಜೆಪಿಯವರಿಗೆ ಇಲ್ಲ ಎಂದು ವ್ಯಂಗ್ಯವಾಗಿ ನುಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೇರವಾಗಿ ಸಿಕ್ಕಿಬಿದ್ದಿದ್ದಾರೆ. ದಲಿತರ ಹಣದಿಂದ ರಾಜೀನಾಮೆ ಕೊಟ್ಟ ಸಚಿವರ ಕಲ್ಯಾಣಕ್ಕೆ ಹಣ ಖರ್ಚಾಗಿದೆ. ದಲಿತರೂ ದೊಡ್ಡ ಹೋರಾಟಕ್ಕೆ ಇಳಿಯಲಿದ್ದಾರೆ ಎಂದು ಪ್ರಕಟಿಸಿದರು. ಸರಕಾರದ ದಿನಗಣನೆ ಆರಂಭವಾಗಿದೆ. ಸಿದ್ದರಾಮಯ್ಯ ಯಾವತ್ತು ರಾಜೀನಾಮೆ ಕೊಡುತ್ತಾರೆ ಎಂಬುದು ಶೀಘ್ರವೇ ಗೊತ್ತಾಗಲಿದೆ ಎಂದರು.
BREAKING: ಬೆಂಗಳೂರಲ್ಲಿ ಠಾಣೆಯಲ್ಲಿ ‘ಪೊಲೀಸ್ ಸಿಬ್ಬಂದಿ’ಗಳ ನಡುವೆ ಗಲಾಟೆ: ‘ASI’ ಮೇಲೆ ‘HC’ ಹಲ್ಲೆಗೆ ಯತ್ನ.?