ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳು ಗಲಾಟೆ ಮಾಡಿಕೊಂಡು. ASI ಮೇಲೆ, HC ಹಲ್ಲೆಗೂ ಯತ್ನಿಸಿದ್ದಾರೆ ಎನ್ನಲಾದಂತ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿತ್ತು. ಈ ಘಟನೆ ಸಂಭಂದ ASI, HC ಅಮಾನತುಗೂಳಿಸಿ ಡಿಸಿಪಿ ಆದೇಶಿಸಿದ್ದಾರೆ.
ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಎಸ್ಐ ಮಂಜುನಾಥ್ ಹಾಗೂ ಹೆಚ್ ಕಾನ್ಸ್ ಸ್ಟೇಬಲ್ ಅಂಜನಾಮೂರ್ತಿ ನಡುವೆ ಗಲಾಟೆಯಾಗಿದೆ ಎಂದು ಹೇಳಲಾಗುತ್ತಿದೆ.
ಜುಲೈ.16ರಂದು ಪ್ರಕರಣವೊಂದರ ಬಗ್ಗೆ ಎಎಸ್ಐ ಮಂಜುನಾಥ್ ಅವರು ಬೇರೆ ಸಿಬ್ಬಂದಿಗಳೊಂದಿಗೆ ಮಾತನಾಡುತ್ತಿದ್ದಂತ ಸಂದರ್ಭದಲ್ಲಿ ಹೆಚ್ ಸಿ ಅಂಜನಾಮೂರ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದಷ್ಟೇ ಅಲ್ಲದೇ ಎಎಸ್ಐ ಮಂಜುನಾಥ್ ಮೇಲೆ ಹೆಡ್ ಕಾನ್ಸ್ ಸ್ಟೇಬಲ್ ಅಂಜನಾಮೂರ್ತಿ ಅವರು ಹಲ್ಲೆಗೂ ಮುಂದಾಗಿದ್ದಾರೆ. ಈ ವೇಳೆಯಲ್ಲಿ ಠಾಣೆಯಲ್ಲಿದ್ದಂತ ಇತರೆ ಸಿಬ್ಬಂದಿಗಳು ಜಗಳ ಬಿಡಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.
ಈ ಘಟನೆಯಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವಂತ ಎಎಸ್ಐ ಮಂಜುನಾಥ್ ಆಘಾತಕ್ಕೊಳಗಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈಗಾಗಲೇ ಎಎಸ್ಐ ಮಂಜುನಾಥ್ ಎರಡು ಸ್ಟಂಟ್ ಅಳವಡಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಈ ಕುರಿತಂತೆ ಕನ್ನಡ ನ್ಯೂಸ್ ನೌ ಸಂಪಾದಕ ವಸಂತ ಬಿ ಈಶ್ವರಗೆರೆ ಅವರು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಪಿಐ ರವಿಕುಮಾರ್ ಅವರಿಗೆ ಕರೆ ಮಾಡಿ ವಿಚಾರಿಸಿದಾಗ, ಎಎಸ್ಐ ಮಂಜುನಾಥ್ ಹಾಗೂ ಹೆಡ್ ಕಾನ್ಸ್ ಸ್ಟೇಬಲ್ ಅಂಜನಾಮೂರ್ತಿ ನಡುವೆ ಯಾವುದೇ ಗಲಾಟೆಯಾಗಿಲ್ಲ. ಪರಸ್ಪರ ಮಾತನಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೂ ತರಲಾಗಿದೆ ಎಂದಿದ್ದರು.
ಇದೀಗ ಇಲಾಖಾ ತನಿಖೆ ಬಾಕಿ ಇರಿಸಿ ಎಎಸ್ಐ ಮಂಜುನಾಥ್ ಹಾಗೂ ಹೆಡ್ ಕಾನ್ಸ್ ಸ್ಟೇಬಲ್ ಅಂಜನಾಮೂರ್ತಿ ಅವರನ್ನು ಅಮಾನತುಗೂಳಿಸಿ ಡಿಸಿಪಿ ಆದೇಶಿಸಿದ್ದಾರೆ.
BIG UPDATE: ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಕೇಸ್: ಮತ್ತೊಂದು ಮೃತದೇಹ ಪತ್ತೆ, ಮೃತರ ಸಂಖ್ಯೆ 7ಕ್ಕೆ ಏರಿಕೆ