ಹಾವೇರಿ : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಹಾವೇರಿ ಜಿಲ್ಲೆಯಲ್ಲಿ ಮಳೆಗೆ ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಇಂದು ಮುಂಜಾನೆ ಮಳೆಗೆ ಮನೆಯ ಗೋಡೆ ಕುಸಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ತಾಯಿ ಚೆನ್ನಮ್ಮ, ಮಕ್ಕಳಾದ ಅಮೂಲ್ಯ, ಅನನ್ಯಾ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಮಲಗಿದ್ದ ಆರು ಜನರ ಮೇಲೆ ಗೋಡೆ ಕುಸಿದಿದೆ. ಮೂವರು ಸಾವನ್ನಪ್ಪಿದು, ಉಳಿದ ಮೂವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸವಣೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.