ಬೆಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಇವರು ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್, ಡೆಹರಾಡೂನ್. ಇಲ್ಲಿಗೆ 8ನೇ ತರಗತಿ ಪ್ರವೇಶಕ್ಕಾಗಿ 01 ಡಿಸೆಂಬರ್ 2024ರಲ್ಲಿ ನಡೆಯಲಿರುವ ಪ್ರವೇಶ ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಜುಲೈ 2025ನೇ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ದಿನಾಂಕ 01ನೇ ಡಿಸೆಂಬರ್ 2024 ರಂದು ನಡೆಸಲಾಗುವುದು.
ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ದಿನಾಂಕ 01-07-2025 ರಂತೆ ಹನ್ನೊಂದುವರೆ ವರ್ಷದಿಂದ ಹದಿಮೂರು ವರ್ಷದೊಳಗಿರುವ (ಅಂದರೆ ದಿನಾಂಕ 02-07-2012 ರಿಂದ 01-01-2014 ರೊಳಗೆ) ಜನಿಸಿರುವ ಬಾಲಕರು ಮತ್ತು ಬಾಲಕಿಯರು ಮಾತ್ರ ಸದರಿ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ.
ಈ ಸಂಸ್ಥೆಯ ಮುಖ್ಯ ಗುರಿ ಯುವಕ ಮತ್ತು ಯುವತಿಯರನ್ನು ದೇಶದ ಸಶಸ್ತ್ರ ಪಡೆಗೆ ಸೇರಲು ಸಿದ್ಧಗೊಳಿಸುವುದು ಹಾಗೂ ಈ ನಿಟ್ಟಿನಲ್ಲಿ ಯುವಕ ಮತ್ತು ಯುವತಿಯರಿಗೆ ಸರ್ವ ರೀತಿಯ ವಿಧ್ಯಾಭ್ಯಾಸ/ತರಬೇತಿ ನೀಡುಲಾಗುವುದು. ಕಾಲೇಜಿನಲ್ಲಿ ವರ್ಷವೊಂದಕ್ಕೆ ಪ್ರಸಕ್ತ ವಿಧ್ಯಾಭ್ಯಾಸ ಶುಲ್ಕ ರೂ.98,650/-ಗಳು (Genral Category) ಹಾಗೂ ರೂ 81,850/- (SC/ST) ಗಳಾಗಿರುತ್ತದೆ. ಇದು ಕಾಲ ಕಾಲಕ್ಕೆ ಹೆಚ್ಚಾಗಬಹುದು. ವಿಧ್ಯಾರ್ಥಿ ಮತ್ತು ವಿದ್ಯಾರ್ಥಿನಿಯು ಪ್ರವೇಶ ಸಮಯದಲ್ಲಿ ರೂ.50,000/-ಭದ್ರತಾ ಠೇವಣಿ ನೀಡಬೇಕಾಗುತ್ತದೆ. ಸದರಿ ಮೊತ್ತವನ್ನು ವಿದ್ಯಾರ್ಥಿಯು ಪದವೀಧರನಾದ ಮತ್ತು ವಿಧ್ಯಾರ್ಥಿನಿ ಪದವೀಧರೆಯಾದ ಬಳಿಕ ಹಿಂತಿರುಗಿಸಲಾಗುವುದು, ಅರ್ಜಿ ನಮೂನೆಗಳನ್ನು ಪಡೆಯುವ ವಿಧಾನ. ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಿಟರಿ ಕಾಲೇಜ, ಗರಹಿ ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ್, ಪಿನ್ – 248003 ಮೂಲಕ ಪಡೆಯಬಹುದು
ಸಾಮಾನ್ಯ ಅಭ್ಯರ್ಥಿಗಳಿಗೆ ಆನ್ ಲೈನ್ ಪಾವತಿ ರೂ.600/-ಗಳು ಮತ್ತು ಎಸ್ಸಿ/ಎಸ್‍ಟಿ ಅಭ್ಯರ್ಥಿಗಳಿಗೆ ರೂ.555/-ಗಳು. ಆನ್ ಲೈನ್ ಪಾವತಿ ಮಾಡುವ ಮೂಲಕ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕಗಳನ್ನು ಸಹ ಪಡೆಯಬಹುದು. ವೆಬ್ ಸೈಟ್ www.rimc.gov.in.. ಗೆ ಸ್ವೀಕರಿಸಿದ ನಂತರ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕಗಳನ್ನು ಸ್ಪೀಡ್ ಪೋಸ್ಟ್ ಮೂಲಕ ರವಾನಿಸಲಾಗುತ್ತದೆ.
ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ – ಪತ್ರಿಕೆಗಳ ಕಿರುಪುಸ್ತಕವನ್ನು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/-ಗಳ ಬೇಡಿಕೆಯ ಕರಡು ಮತ್ತು ಎಸ್ಸಿ/ಎಸ್‍ಟಿ ಅಭ್ಯರ್ಥಿಗಳಿಗೆ ರೂ.555/-ಗಳ ಬೇಡಿಕೆಯ ಕರಡು ಕಳುಹಿಸಿ ಲಿಖಿತ ವಿನಂತಿಯ ಪರವಾಗಿ ಜಾತಿ ಪ್ರಮಾಣ ಪತ್ರದೊಂದಿಗೆ ಕಳುಹಿಸಬಹುದು. “THE COMMANDANT RIMC FUND” PAYABLE AT HDFC BANK, BALLUPUR CHOWK, DEHRADUN (BANK CODE. 1399), UTTARAKHAND ವಿಳಾಸಕ್ಕೆ ಪಿನ್ ಕೋಡ್ ಮತ್ತು ಸಂಪರ್ಕ ಸಂಖ್ಯೆಯೊಂದಿಗೆ ದೊಡ್ಡ ಅಕ್ಷರಗಳಲ್ಲಿ ಟೈಪ್ ಮಾಡಿ ಬರೆಯಬೇಕು. ಕಾನೂನು ಬಾಹಿರ ಅಥವಾ ಅಪೂರ್ಣ ವಿಳಾಸದಿಂದ ಉಂಟಾಗುವ ಪ್ರಾಸ್ಪೆಕ್ಟಸ್‍ನ ಸಾಗಾಣಿಕೆಯಲ್ಲಿ ಯಾವುದೇ ಅಂಚೆ ವಿಳಂಬ ಅಥವಾ ನಷ್ಟಕ್ಕೆ ಖIಒಅ ಸಂಸ್ಥೆಯು ಜವಾಬ್ದಾರರಾಗಿರುವುದಿಲ್ಲ
ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಕೆಳಗಿನ ಅಡಕಗಳೊಂದಿಗೆ ಸೆಪ್ಟೆಂಬರ್ 30, 2024 ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಮ್ ಕಾರ್ಯಪ್ಪ ಭವನ್, ನಂ.58 ಫೀಲ್ಡ್ ಮಾರ್ಷಲ್ ಕೆ.ಎಮ್ ಕಾರ್ಯಪ್ಪ ರಸ್ತೆ, ಬೆಂಗಳೂರು 25 ಇವರಿಗೆ ಸಲ್ಲಿಸತಕ್ಕದ್ದು . ಅರ್ಜಿಯೊಂದಿಗೆ ಮುನ್ಸಿಪಾಲಿಟಿ/ಗ್ರಾಮ ಪಂಚಾಯತ್ ಪ್ರಾಧಿಕಾರ ವತಿಯಿಂದ ಆಂಗ್ಲ ಭಾμÉಯಲ್ಲಿ ಪಡೆದ ಅಭ್ಯರ್ಥಿಯ ಜನ್ಮ ಪ್ರಮಾಣ ಪತ್ರದ ಧೃಢೀಕೃತ ಪ್ರತಿ. ಐದು ಪಾಸ್‍ಪೋರ್ಟ್ ಸೈಜಿನ ಭಾವಚಿತ್ರಗಳು.(ಅರ್ಜಿಗಳಲ್ಲಿ ಅಂಟಿಸಿದ ಭಾವಚಿತ್ರವನ್ನು ಸೇರಿಸಿ) ಎಸ್‍ಸಿ/ಎಸ್‍ಟಿ ಅಭ್ಯರ್ಥಿಗಳಾಗಿದ್ದಲ್ಲಿ ಸಕ್ಷಮ ಪ್ರಾಧಿಕಾರದಿಂದ ನೀಡಿದ ಜಾತಿ ಪ್ರಮಾಣ ಪತ್ರದ ಧೃಢೀಕೃತ ಪ್ರತಿ (ಆಂಗ್ಲ ಭಾಷೆಯಲ್ಲಿ ಇರುವಂತೆ ಮಾತ್ರ) ಪರೀಕ್ಷಾ ಪ್ರವೇಶ ಪತ್ರವನ್ನು ತ್ವರಿತ/ನೊಂದಾಯಿತ ಅಂಚೆದ್ವಾರ ರವಾನಿಸಲು ರೂ. 42/-ರ ಅಂಚೆ ಚೀಟಿ ಅಂಟಿಸಿದ ಸ್ವವಿಳಾಸ ಲಕೋಟೆ.
ಶಾಲಾ ಪ್ರಾಚಾರ್ಯರು/ಮುಖ್ಯೋಪಾಧ್ಯಾಯರಿಂದ ಅಭ್ಯರ್ಥಿಯ ಜನ್ಮ ದಿನಾಂಕ ಮತ್ತು ಓದುತ್ತಿರುವ ತರಗತಿ ಬಗ್ಗೆ ಪಡೆದ ಪ್ರಮಾಣ ಪತ್ರದ ಮೂಲ. ಪ್ರತಿ (ದೃಢೀಕರಿಸಿದ ಅಭ್ಯರ್ಥಿಯ ಭಾವಚಿತ್ರದೊಂದಿಗೆ) ಕರ್ನಾಟಕ ರಾಜ್ಯದ ವಾಸಸ್ಥಳ ಧೃಡೀಕರಣ ಪತ್ರ (ತಹಸೀಲ್ದಾರರಿಂದ),(in English version only).ಆಧಾರ್ ಕಾರ್ಡ್ ಪ್ರತಿ (ಕಡ್ಡಾಯ)ಯೊಂದಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25589459 ಅಥವಾ ಸಮೀಪದಲ್ಲಿರುವ ತಮ್ಮ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯವನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.