ಮೈಸೂರು : ಮೈಸೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಗ್ಯಾಸ್ ಟ್ಯಾಂಕರ್ ಒಂದು ದಂಪತಿಗಳು ತೆರುಳುತ್ತಿದ್ದ ಬೈಕ್ ಗೆ ರಭಸವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ದಂಪತಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೌದು ಈ ಒಂದು ಘಟನೆ ಮೈಸೂರಿನ ಕೂರ್ಗಳ್ಳಿ ಬಳಿ ರಿಂಗ್ ರಸ್ತೆಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಬೈಕ್ನಲ್ಲಿ ತೆರಳುತ್ತಿದ್ದ ಪತಿ ಚಂದ್ರು ಹಾಗೂ ಪತ್ನಿ ಪ್ರೇಮಾ ದುರ್ಮರಣ ಹೊಂದಿದ್ದಾರೆ. ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ದಂಪತಿಗಳ ದೇಹಗಳು ಛಿದ್ರ ಛಿದ್ರವಾಗಿವೆ. ಸ್ಥಳಕ್ಕೆ ವಿವಿ ಪುರ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.