ಮಂಡ್ಯ: ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವಂತ ಮಳೆಯಿಂದಾಗಿ ಮಂಡ್ಯದ ಕೆ ಆರ್ ಎಸ್ ಡ್ಯಾಂ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನಲೆಯಲ್ಲಿ ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು, ಜನರು ನದಿ ಕೊಳ್ಳಕ್ಕೆ ಇಳಿಯದಂತೆ ಮುನ್ನಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ.
ಈ ಬಗ್ಗೆ ಕಾವೇರಿ ನೀರಾವರಿ ನಿಗಮದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೃಷ್ಣರಾಜ ಸಾಗರ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು, ಕೆ ಆರ್ ಎಸ್ ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ಕಾವೇರಿ ನದಿಗೆ ಬಿಡಲಾಗುವುದು ಅಂತ ತಿಳಿಸಿದೆ.
ಈ ಹಿನ್ನಲೆಯಲ್ಲಿ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ, ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿದೆ.
ಒಟ್ಟಾರೆಯಾಗಿ ಸಂಪೂರ್ಣ ಭರ್ತಿಯತ್ತ KRS ಡ್ಯಾಂ ಸಾಗುತ್ತಿದೆ. ಮತ್ತೊಂದೆಡೆ ಭಾರೀ ಪ್ರಮಾಣದಲ್ಲಿ ಒಳ ಹರಿವು ಮುಂದುವರಿಕೆ. ಮುಂಜಾಗ್ರತ ಕ್ರಮವಾಗಿ ನದಿಗೆ ನೀರು ಬಿಡುಗಡೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ಸದ್ಯ 10 ರಿಂದ 25 ಸಾವಿರ ಕ್ಯೂಸೆಕ್ ನೀರನ್ನ ನದಿಗೆ ಬಿಡುವ ಸಾಧ್ಯತೆ.
ಒಳ ಹರಿವು ಮತ್ತಷ್ಟು ಏರಿಕೆಯಾದ್ರೆ ಹೊರ ಹರಿವನ್ನೂ ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗುತ್ತದೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಕ್ರಮ ವಹಿಸುವಂತೆ ಮನವಿಯನ್ನು ಕಾವೇರಿ ನೀರಾವರಿ ನಿಗಮದಿಂದ ಮಾಡಲಾಗಿದೆ.
BREAKING: ಪ್ರೊಬೇಷನರಿ IAS ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ FIR ದಾಖಲಿಸಿದ UPSC | Puja Khedkar
ರಾಜ್ಯದಲ್ಲಿ 6 ತಿಂಗಳಲ್ಲಿ 1,791 ಡ್ರಗ್ಸ್ ಪ್ರಕರಣಗಳು ದಾಖಲು : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ