ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ನಟ ದರ್ಶನ್ ಅವರು ಜೈಲಿನಲ್ಲಿ ನನಗೆ ಊಟ ಸರಿಹೊಂದುತ್ತಿಲ್ಲ. ಹಾಗಾಗಿ ಮನೆಯಿಂದ ಊಟ, ಬಟ್ಟೆ ಪುಸ್ತಕ ಸೇರಿದಂತೆ ಇತರೆ ವಸ್ತುಗಳು ಬೇಕು ಎಂದು ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಪೀಠವು ಜುಲೈ 29ಕ್ಕೆ ವಿಚಾರಣೆ ಮುಂದೂಡಿತು.
ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ಆರ್ ಕೃಷ್ಣಮೂರ್ತಿಯವರು ಈ ಕೇಸಿನಲ್ಲಿ ನಾನು ಮಧ್ಯಂತರ ಆದೇಶ ನೀಡಲು ಬಯಸುವುದಿಲ್ಲ. ವಾದಮಂಡನೆ ಆಲಿಸಿದ ನಂತರವೇ ತೀರ್ಮಾನಿಸಬೇಕಾಗುತ್ತದೆ. ನೀವು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಅರ್ಜಿ ಸಲ್ಲಿಸುವುದು ಸೂಕ್ತ. ಸರ್ಕಾರ ಎಸ್ಪಿಪಿ ಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಅವಕಾಶ ನೀಡಿತು.
ಮ್ಯಾರೇಜ್ ಸ್ಟ್ರೈಟ್ ಕೋರ್ಟ್ ಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ನ್ಯಾಯಮೂರ್ತಿ ಎಸ್ ಆರ್ ಕೃಷ್ಣಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೈದಿಗಳಿರುವ ಎಲ್ಲಾ ಮೂಲಭೂತ ಹಕ್ಕುಗಳು ದರ್ಶನಗೆ ಇದೆ ಸೇ. 30 ರಲ್ಲಿ ಮನೆ ಊಟ ಪಡೆಯಲು ಕೈದಿಗೆ ಅವಕಾಶವಿದೆ ಎಂದು ತಿಳಿಸಿದರು.
ದರ್ಶನ್ ಸಲ್ಲಿಸಿರುವ ರಿಟ್ ಅರ್ಜಿಯ ಕುರಿತು ಇಂದು ಹೈಕೋರ್ಟ್ ನಲ್ಲಿ ಎಸ್ ಆರ್ ಕೃಷ್ಣಕುಮಾರ್ ಅವರಿಂದ ವಿಚಾರಣೆ ನಡೆಯಿತು. ಜೈಲಿನಲ್ಲಿ 5 ಸಾವಿರ ಖೈದಿಗಳು ದಿನವೂ ಅಲ್ಲಿ ಊಟ ಮಾಡುತ್ತಿದ್ದಾರೆ.ಯಾರಿಗೂ ಫುಡ್ ಪಾಯಿಸನ್ ಆಗಿಲ್ಲ. ದರ್ಶನ್ ಕೂಡ ಫುಡ್ ಪಾಯಿಸನ್ ಬಗ್ಗೆ ವೈದ್ಯರಿಗೆ ಹೇಳಿಲ್ಲ ಎಂದು ಸರ್ಕಾರದ ಪರ ಎಎಪಿ ಭಾನುಪ್ರಕಾಶ್ ಆಕ್ಷೇಪ ವ್ಯಕ್ತಪಡಿಸಿದರು.
ವಿಚಾರಣೆಯ ಬಳಿಕ ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯ ಪೀಠವು ದರ್ಶನ್ ಅವರು ಸಲ್ಲಿಸಿದ್ದ ರಿಟ್ ಅರ್ಜಿ ಕುರಿತಂತೆ 29ಕ್ಕೆ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ.