ಮೈಸೂರು : ಮುಡಾದಲ್ಲಿ ಅಕ್ರಮವಾಗಿ ಸೈಟ್ ಹಂಚಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರ್ಟಿಐ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದ್ದರು. ಇದೀಗ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಅದೇ ಆರ್ ಟಿ ಐ ಕಾರ್ಯಕರ್ತರ ವಿರುದ್ಧ ಮೈಸೂರಿನ ಕಮಿಷನರ್ ಗೆ ಕಾಂಗ್ರೆಸ್ ದೂರು ಸಲ್ಲಿಸಿದೆ.
ಹೌದು ಮೈಸೂರು ಜಿಲ್ಲಾ ಕಾಂಗ್ರೆಸ್ ಘಟಕದಿಂದ ಇದೀಗ ಕಮಿಷನರ್ ಗೆ ದೂರು ಸಲ್ಲಿಸಲಾಗಿದೆ. ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟಕರ್ ಗೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಮತ್ತು ಮೈಸೂರು ನಗರ ಅಧ್ಯಕ್ಷ ಆರ್ ಮೂರ್ತಿ ಹಾಗೂ ಗ್ರಾಮಾಂತರ ಅಧ್ಯಕ್ಷ ಡಾ ಬಿ.ಜೆ ವಿಜಯ್ ಕುಮಾರ್ ನೇತೃತ್ವದಲ್ಲಿ ದೂರು ಸಲ್ಲಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ವ್ಯಕ್ತಿತ್ವ ಕೆಡಿಸಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆರ್ಟಿಐ ಕಾರ್ಯಕರ್ತರಾದ ಗಂಗರಾಜು ಹಾಗೂ ಸ್ನೇಹಮಯಿಕೃಷ್ಣ ವಿರುದ್ಧ ದೂರು ಸಲ್ಲಿಸಿದ್ದಾರೆ. ಆರ್ಟಿಐ ಕಾರ್ಯಕರ್ತರು ವಿರುದ್ಧ ಕೆಸ್ ದಾಖಲಿಸಿ ಬಂಧಿಸುವಂತೆ ಕೂಡ ಇದೆ ವೇಳೆ ಮನವಿ ಮಾಡಿದ್ದಾರೆ. ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ಕಾಂಗ್ರೆಸ್ ಮುಖಂಡರು ಮನವಿ ಮಾಡಿದ್ದಾರೆ.