ಬೆಳಗಾವಿ : ಬೆಳಗಾವಿಯಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದು, ಗ್ರಾಮ ಲೆಕ್ಕಾಧಿಕಾರಿ ಕಾರಲ್ಲಿ ಅಕ್ರಮವಾಗಿ ಕೋಟಿ ಕೋಟಿ ಹಣ ಸಾಗಾಟ ಮಾಡುತ್ತಿದ್ದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಬಳಿ ಇಂದು ನಡೆದಿದೆ.
ನಿಪ್ಪಾಣಿ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಶಿವಪ್ಪ ಢವಳೇಶ್ವರ ಎಂಬುವವರ ಕಾರಲ್ಲಿ ಹಣ ಸಾಗಾಟ ಮಾಡಲಾಗುತ್ತಿತ್ತು. ಈ ಹಣವನ್ನು ಅಕ್ರಮವಾಗಿ ಬೆಳಗಾವಿಯಿಂದ ಬಾಗಲಕೋಟೆಗೆ ಸಾಗಿಸುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
ಗ್ರಾಮ ಲೆಕ್ಕಾಧಿಕಾರಿ ಕಾರಲ್ಲಿ ದಾಖಲೆ ರಹಿತವಾಗಿ 1 ಕೋಟಿ 10 ಲಕ್ಷ ಹಣ ಸಾಗಿಸಲಾಗುತ್ತಿತ್ತು. ಈ ವೇಳೆ ದಾಳಿ ಮಾಡಿದ ಪೊಲೀಸರು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಚೆಕ್‌ಪೋಸ್ಟ್‌ನಲ್ಲಿ ವಶಕ್ಕೆ1 ಕೋಟಿ 10 ಲಕ್ಷ ಹಣವನ್ನ ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ರಾಮದುರ್ಗ ಪೊಲೀಸರು ದಾಳಿ ನಡೆಸಿ ನಗದು ವಶಕ್ಕೆ ಪಡೆದಿದ್ದಾರೆ. ಹಣ ವಶಕ್ಕೆ ಪಡೆದು ಆದಾಯ ತೆರಿಗೆ ಅಧಿಕಾರಿಗಳಿಗೆ ಪ್ರಕರಣ ವರ್ಗಾವಣೆ ಮಾಡಿದ್ದಾರೆ. ರಾಮದುರ್ಗ ಡಿವೈಎಸ್‌ಪಿ ಎಂ. ಪಾಂಡುರಂಗಯ್ಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.