ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿ ಹೋಗಿದ್ದು, ಈ ನಡುವೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲಾಧಿಕಾರಿಗಳು ರಜೆಯನ್ನು ನೀಡಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಬೆಳಗಾವಿಗೆ ಆರೆಂಜ್ ಅಲರ್ಟ್ ಇದೆ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ. ಆದರೆ ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೋಮಾ ಕಾಲೇಜುಗಳಿಗೆ ರಜೆ ಇರುವುದಿಲ್ಲ ಅಂಥ ಇದೇ ವೇಳೆ ಮಾಹಿತಿ ನಿಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಸಾಗರ, ಸೊರಬ, ಹೊಸನಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ ಉತ್ತರ ಕನ್ನಡ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಕೂಡ ರಜೆ ನೀಡಲಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶಿಸಿದ್ದಾರೆ. ಇದಲ್ಲದೇ ಕೊಡಗಿನಲ್ಲಿ ಇಂದೂ ಕೂಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಪದವಿ ಹಾಗೂ ಸ್ನಾತಕೋತ್ತರ ಕಾಲೇಜು ಹೊರತುಪಡಿಸಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.