ಬೆಂಗಳೂರು : ಮುಡಾದಲ್ಲಿ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಎನ್ ಆರ್ ರಮೇಶ್ ಎನ್ನುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಭೂ ಹಗರಣ ಆರೋಪ ಮಾಡಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದು, ದಾಖಲೆಗಳ ಸಮೇತ ಎನ್ ಆರ್ ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಭೂ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ರಮೇಶ್ ದೂರು ಸಲ್ಲಿಸಿದ್ದಾರೆ.
ದೂರು ಸಲ್ಲಿಸುವ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸುಮಾರು 400ಕ್ಕೂ ಹೆಚ್ಚು ಪುಟಗಳ ದಾಖಲೆಗಳ ಸಮೇತ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಇದೆ ವೇಳೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇನ್ನಿತರರನ್ನು ತನಿಖೆ ಮಾಡಿ ಎಂದು ಅವರ ವಿರುದ್ಧ ಕೂಡ ಲೋಕಾಯುಕ್ತ ತನಿಖೆಗೆ ಅವರು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.