ಧಾರವಾಡ : ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಒಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕನ ಎರಡು ಕಾಲು ಕಟ್ ಆಗಿದ್ದು ನಾಲ್ವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದೆ
ಹುಬ್ಬಳ್ಳಿಯಿಂದ ಕುಮಟಾಾಗೆ ಚಲಿಸುತ್ತಿದ್ದ ಈ ಒಂದು ಬಸ್ ನಲ್ಲಿ 30 ಜನರು ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಗಾಯಗೊಂಡಿದ್ದವರನ್ನ ತಕ್ಷಣ ಹುಬ್ಬಳ್ಳಿ ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.