ಮಂಡ್ಯ: ಜಿಲ್ಲೆಯ ಕೆ ಆರ್ ಎಸ್ ಡ್ಯಾಂಗೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಈ ಹಿನ್ನಲೆಯಲ್ಲಿ ಕಾವೇರಿ ನದಿಗೆ 15,000 ದಿಂದ 35,000 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ.
ಈ ಬಗ್ಗೆ ಕಾವೇರಿ ನೀರಾವರಿ ನಿಗಮ ನಿಯಮಿತದ ಕಾರ್ಯಪಾಲಕ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ಪ್ರವಾಹದ ಮುನ್ನೆಚ್ಚರಿಕೆಯ ಸೂಚನೆ ನೀಡಿದ್ದಾರೆ. ಕೃಷ್ಣರಾಜಸಾಗರ ಜಲನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೆ ಆರ್ ಎಸ್ ಡ್ಯಾಂಗೆ ಹೆಚ್ಚಿನ ನೀರು ಹರಿದು ಬರುತ್ತಿದೆ ಅಂತ ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ಕೆ ಆರ್ ಎಸ್ ಜಲಾಶಯದಿಂದ ಸುಮಾರು 15,000 ದಿಂದ 35,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಈ ಪ್ರಮಾಣವು ಹೆಚ್ಚಾಗುವ ಸಂಭವವಿರುತ್ತದೆ. ತಗ್ಗು ಪ್ರದೇಶದಲ್ಲಿನ, ಕಾವೇರಿ ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ.
ಇನ್ನೂ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ. ಸೂಕ್ತ ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಿಳಿಸಿದ್ದಾರೆ.
ವರದಿ: ಗಿರೀಶ್ ರಾಜ್, ಮಂಡ್ಯ
‘ತ್ಯಾಜ್ಯ’ದಿಂದ ವಿದ್ಯುತ್ ಉತ್ಪಾದನೆ ‘KPCL’ನ ಮಹತ್ವದ ಸಾಧನೆ: ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ
Viral Video : 32 ಹಲ್ಲುಗಳೊಂದಿಗೆ ಜನಿಸಿದ ಮಗು ; ಕಿಲಕಿಲ ನಗುತ್ತಿರುವ ಕಂದನ ವಿಡಿಯೋ ವೈರಲ್