ಬೆಂಗಳೂರು : ರಾಜ್ಯದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದ್ದು, ಪ್ರಸಕ್ತ ಶೈಕ್ಷಿಣಿಕ ಸಾಲಿನಿಂದಲೇ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಟರ್ ಕೋರ್ಸ್ಗಳ ಶುಲ್ಕವನ್ನು ಶೇ.10 ಹೆಚ್ಚಿಳ ಮಾಡಲಾಗಿದೆ.
ಈ ಕುರಿತು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಸರ್ಕಾರಿ ಕಾಲೇಜುಗಳು, ಸರ್ಕಾರಿ ಅನುದಾನಿತ ಕಾಲೇಜುಗಳು, ಮೈಸೂರು ವಿಶ್ವವಿದ್ಯಾಲಯ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜುಗಳಲ್ಲಿ ಶೇ.50 ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಟರ್ ಸೀಟುಗಳಿಗೆ 42,116 ರು. ಶುಲ್ಕ ನಿಗದಿಪಡಿಸಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದೆ.
ಖಾಸಗಿ ಕಾಲೇಜುಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳಿಗೆ 76,135 ರು. ಅಥವಾ 84,596 ರು. ಶುಲ್ಕ ನಿಗದಿಯಾಗಿದೆ. ಕಾಮೆಡ್-ಕೆ ಕೋಟಾದ ಸೀಟುಗಳಿಗೆ 1,86, 111 ರೂ.ಅಥವಾ 2,61,477 ರು. ಗೆ ಹೆಚ್ಚಳವಾಗಿದೆ.