ಬೆಂಗಳೂರು : ಕರ್ತವ್ಯದ ವೇಳೆ ರೀಲ್ಸ್ ಮಾಡುವ ಕೆಎಸ್ ಆರ್ ಟಿಸಿ (KSRTC), ಬಿಎಂಟಿಸಿ (BMTC) ನೌಕಕರಿಗೆ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಿದ್ದು, ರೀಲ್ಸ್ ಮಾಡಿದ್ರೆ ಅಮಾನತು ಮಡುವುದಾಗಿ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ.
ಕರ್ತವ್ಯದ ವೇಳೆ ಬಸ್ ಡ್ರೈವರ್, ಕಂಡಕ್ಟರ್ ಗಳು ರೀಲ್ಸ್ ಮಾಡುತ್ತಿದ್ದು, ಇದರಿಂದ ಪ್ರಯಾಣಿಕರಿಗೆ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಇಲಾಖೆಗೆ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಮಹತ್ವದ ಸೂಚನೆ ನೀಡಿದೆ.
ಡ್ಯೂಟಿ ಟೈಮ್ ನಲ್ಲಿ ಕೆಎಸ್. ಆರ್ ಟಿಸಿ, ಬಿಎಂಟಿಸಿ ಬಸ್ ಚಾಲಕರು, ನಿರ್ವಾಹಕರು ರೀಲ್ಸ್ ಮಾಡಿದ್ರೆ ಅವರನ್ನು ಅಮಾನತು ಮಾಡಲಾಗುವುದು ಎಂದು ಸಾರಿಗೆ ಖಡಕ್ ಎಚ್ಚರಿಕೆ ನೀಡಿದೆ.