ಬೆಂಗಳೂರು: ರಾಜ್ಯದ ಅನೇಕ ಭಾಗಗಳಲ್ಲಿ ಕುಮ್ಕಿ ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡು, ಸರ್ಕಾರದಿಂದ ಆ ಜಮೀನು ಮಂಜೂರಾತಿಯ ನಿರೀಕ್ಷೆಯಲ್ಲಿ ರೈತರಿದ್ದಾರೆ. ಆದ್ರೇ ಕುಮ್ಕಿ ಜಮೀನು ಮಂಜೂರಾತಿ ಇಲ್ಲ. ಕುಮ್ಕಿ ಜಮೀನಿನಲ್ಲಿ ಬಡವರು ಮನೆ ಕಟ್ಟಿಕೊಂಡಿರೋದನ್ನು ತೆರವು ಮಾಡುವುದಿಲ್ಲ ಅಂತ ಕಂದಾಯ ಸಚಿವ ಕೃಷ್ಣಭೈರೇಗೌಡ ಸ್ಪಷ್ಟ ಪಡಿಸಿದ್ದಾರೆ.
ವಿಧಾನಸಭಾ ಅಧಿವೇಶನದಲ್ಲಿ ಸೋಮವಾರ ಬಿಜೆಪಿ ನಾಯಕ ವಿ. ಸುನೀಲ್ ಕುಮಾರ್ ಕುಮ್ಕಿ ಜಮೀನಿನ ಸಮಸ್ಯೆಗಳಿಗೆ ಸಂಬಂಧಿಸಿದ ಪ್ರಶ್ನೆಯೊಂದನ್ನು ಮುಂದಿಟ್ಟಿದ್ದರು.
ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆ ಸಾಧ್ಯವಿಲ್ಲ ಎಂಬ ವಿಚಾರವನ್ನೂ ಸಚಿವ ಕೃಷ್ಣ ಬೈರೇಗೌಡ ಅವರು ಸದನದ ಗಮನಕ್ಕೆ ತಂದರು.
ಈ ಬಗ್ಗೆ ಗಮನ ಸೆಳೆದ ಸಚಿವರು, “ಕುಮ್ಕಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡಿರುವ ಬಡವರ ಬಗ್ಗೆ ವಿಶೇಷ ದೃಷ್ಟಿಯಿಂದ ನೋಡುವ ಅಗತ್ಯವಿದೆ. ಗೋಮಾಳ ಜಾಗದಲ್ಲಿ 94 ಸಿಸಿ ಪ್ರಕಾರ ಮಂಜೂರು ಮಾಡದಿದ್ದರೆ, ಖಂಡಿತ ನನ್ನ ಬಳಿ ಬನ್ನಿ ಗ್ರ್ಯಾಂಟ್ ಮಾಡಿ ಕೊಡುತ್ತೇನೆ. ಆದರೆ, ಕುಮ್ಕಿ ಜಮೀನನ್ನು ಮಂಜೂರು ಮಾಡುವುದು ಸಾಧ್ಯವಿಲ್ಲ. ಇದೇ ಸಂದರ್ಭದಲ್ಲಿ ಬಡವರ ಮನೆಯನ್ನೂ ತೆರವುಗೊಳಿಸಲಾಗದು. ಹಾಗಾಗಿ ಕಾನೂನಾತ್ಮಕವಾಗಿ ಸಕಾರಾತ್ಮಕವಾಗಿ ಮಾಡಬಹುದಾ ಎಂದು ಪ್ರಾಮಾಣಿಕವಾಗಿ ವಿಚಾರ ಮಾಡ್ತೀವಿ ಎಂದರು.
BIG NEWS: ‘ಕುಮ್ಕಿ ಜಮೀನು’ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ‘ಮಂಜೂರಾತಿ’ ಸಾಧ್ಯವಿಲ್ಲ: ಸಚಿವ ಕೃಷ್ಣಭೈರೇಗೌಡ
ನಾನು ಎನ್ನುವುದು ಅಹಂಕಾರ, ನಾವು ಎನ್ನುವುದು ಸಂಸ್ಕಾರ: ಡಿಕೆಶಿ ಕುಟುಕಿದ ಕೇಂದ್ರ ಸಚಿವ HDK