ಮಂಡ್ಯ: ಕಾವೇರಿ ನದಿಗೆ ವಾರಾಣಸಿಯಲ್ಲಿನ ಗಂಗಾ ನದಿಗೆ ಮಾಡಲಾಗುವ ಗಂಗಾ ಆರತಿಯ ಮಾದರಿಯಲ್ಲಿ ಆರತಿ ಕಾರ್ಯಕ್ರಮ ಆಯೋಜಿಸಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಪ್ಪಿಗೆ ಸೂಚಿಸಿದ್ದಾರೆ. ಅಲ್ಲದೆ, ಇದಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಶಾಸಕರು, ಅಧಿಕಾರಿಗಳ ಸಮಿತಿಯನ್ನು ರವಿಸುವುದಾಗಿಯೂ ಘೋಷಿಸಿದ್ದಾರೆ. ಈ ಸಂಬಂಧ ಶಾಸಕ ದಿನೇಶ್ ಗೂಳಿಗೌಡ ಅವರು ಮನವಿ ಮಾಡಿದ್ದನ್ನು ಸಹ ಡಿಸಿಎಂ ಪ್ರಸ್ತಾಪ ಮಾಡಿದ್ದು, ಕೂಡಲೇ ಸ್ಪಂದಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಕಾವೇರಿ ನೀರಾವರಿ ನಿಗಮದ ವತಿಯಿಂದ ಸೋಮವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ಘೋಷಣೆ ಮಾಡಿದ್ದು, ಗಂಗಾ ಆರತಿಯ ಅಧ್ಯಯನಕ್ಕೆ ತಂಡ ರಚಿಸುವುದಾಗಿ ಘೋಷಿಸಿದರು.
ಡಿಸಿಎಂಗೆ ಮನವಿ ಮಾಡಿದ ಶಾಸಕ ದಿನೇಶ್ ಗೂಳಿಗೌಡ
ದೇಶದ ಪವಿತ್ರ ನದಿಗಳಲ್ಲಿ ಕಾವೇರಿ ಕೂಡ ಒಂದು. ಭಾಗಮಂಡಲದಲ್ಲಿ ಉದಯವಾಗಿ ತಮಿಳುನಾಡಿನ ಮಾಯಿಲಾಡುತುರೈ ಜಿಲ್ಲೆಯ ಪುಂಪುರಃ ಎಂಬಲ್ಲಿ ಬಂಗಾಳಕೊಲ್ಲಿ ಸೇರುತ್ತದೆ.
ನದಿಯು ರಾಜ್ಯದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ವ್ಯವಸಾಯ ಮಾಡಲು ಅನುಕೂಲವಾಗುತ್ತಿದೆ. ಕಾವೇರಿಯಿಂದ ಬೆಂಗಳೂರು, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಸೇರಿ ಸುತ್ತಮುತ್ತಲಿನ ಜಿಲ್ಲೆಗಳ ಕೋಟ್ಯಂತರ ಜನರಿಗೆ ಕುಡಿಯುವ ನೀರು ಕೂಡ ಸಿಗುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ 1657 ಕೆರೆಗಳಿವೆ. ಅದರ ಜತೆಗೆ ತಮಿಳುನಾಡು, ಕೇರಳ ಹಾಗೂ ಪಾಂಡಿಚೇರಿ ರಾಜ್ಯಗಳಿಗೂ ಅನುಕೂಲವಾಗಿದೆ. ಉತ್ತರ ಪ್ರದೇಶದ ವಾರಣಾಸಿಯ ಪಕ್ಕ ಕಾಶಿಯ ವಿಶ್ವನಾಥ ದೇವಾಲಯದ ಪಕ್ಕ ಗಂಗಾ ಆರತಿ ಮಾಡಲಾಗುತ್ತದೆ. ಅದೇ ಮಾದರಿಯಲ್ಲಿ ನಮ್ಮ ಪವಿತ್ರ ಕಾವೇರಿ ನದಿಗೂ ಆರತಿ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಡಿಸಿಎಂ, ಕೂಡಲೇ ಒಪ್ಪಿಗೆ ಸೂಚಿಸಿದ್ದಲ್ಲದೆ, ಸಮಿತಿ ರಚನೆಗೂ ಕ್ರಮವಹಿಸುವುದಾಗಿ ಹೇಳಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕರಾದ ದಿನೇಶ್ ಗೂಳಿಗೌಡ ಅವರು, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು, ನನ್ನ ಮನವಿಗೆ ಓಗೊಟ್ಟು, ಕಾವೇರಿ ಪೂಜೆ ಮಾಡುವ ನಿಟ್ಟಿನಲ್ಲಿ ಅಧ್ಯಯನ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮೈಸೂರು, ಮಡಿಕೇರಿ, ಮಂಡ್ಯ ಜಿಲ್ಲೆಗಳ ಹಿರಿಯ ಶಾಸಕರು, ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳ ತಂಡವನ್ನು ವಾರಾಣಸಿಗೆ ಕಳಿಸುವುದಾಗಿ ತಿಳಿಸಿದ್ದಾರೆ. ಈ ತಂಡವು ಅಧ್ಯಯನ ಮಾಡಿ ವರದಿ ಕೊಡಲು ಸೂಚಿಸಿದ್ದಾರೆ. ಜೊತೆಗೆ ಅಲ್ಲಿಂದ ಒಂದು ತಂಡವನ್ನು ಕರೆದುಕೊಂಡು ಬಂದು ಯಾವ ಜಾಗದಲ್ಲಿ ಕಾವೇರಿ ಆರತಿ ನಡೆಸಬಹುದು ಎಂದು ಜಾಗ ಗುರುತಿಸಲಾಗುವುದು. ಒಂದು ತಿಂಗಳ ಒಳಗಾಗಿ ಈ ಕಾರ್ಯಕ್ರಮ ಮಾಡಲಾಗುವುದು. ಧಾರ್ಮಿಕ ದತ್ತಿ ಇಲಾಖೆ, ಕಾವೇರಿ ನೀರಾವರಿ ನಿಗಮ ಹಾಗೂ ಇತರೇ ಇಲಾಖೆಗಳು ಜಂಟಿಯಾಗಿ ಈ ಕಾರ್ಯಕ್ರಮ ರೂಪಿಸುತ್ತವೆ ಎಂದು ಡಿಸಿಎಂ ತಿಳಿಸಿರುವುದು ನಿಜಕ್ಕೂ ಸಂತೋಷದ ವಿಷಯ ಎಂದು ತಿಳಿಸಿದರು.
ಡಿಸಿಎಂ, ಉಸ್ತುವಾರಿ ಸಚಿವರು, ಶಾಸಕರಿಗೆ ಅಭಿನಂದನೆ
ನನ್ನ ಮನವಿಗೆ ಸ್ಪಂದಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯ ಸ್ವಾಮಿ ಅವರು ಹಾಗೂ ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡರಿಗೆ ಕಾವೇರಿ ಕೊಳ್ಳದ ಜನತೆಯ ಪರವಾಗಿ, ಮಂಡ್ಯ, ಬೆಂಗಳೂರು ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ದಿನೇಶ ಗೂಳಿಗೌಡ ತಿಳಿಸಿದ್ದಾರೆ.
BREAKING: ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಜಾಮೀನು ಮಂಜೂರು | Suraj Revanna
ನಾನು ಎನ್ನುವುದು ಅಹಂಕಾರ, ನಾವು ಎನ್ನುವುದು ಸಂಸ್ಕಾರ: ಡಿಕೆಶಿ ಕುಟುಕಿದ ಕೇಂದ್ರ ಸಚಿವ HDK