ಬೆಂಗಳೂರು: ರಾಜ್ಯ ಸರ್ಕಾರದಿಂದ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಜಾರಿಗೊಳಿಸಿ ಶಿಫಾರಸ್ಸು ಅನುಷ್ಠಾನಕ್ಕೆ ಅಧಿಕೃತ ಆದೇಶ ಮಾಡಿದೆ. ಹಾಗಾದ್ರೇ 7ನೇ ವೇತನ ಆಯೋಗದ ಜಾರಿಯಂತೆ ಯಾರಿಗೆ ಎಷ್ಟು ಸಂಬಂಳ ಸಿಗಲಿದೆ ಅನ್ನೋ ಮಾಹಿತಿ ಮುಂದೆ ಓದಿ.
ಈ ಸಂಬಂಧ ಆರ್ಥಿಕ ಇಲಾಖೆಯಿಂದ ಅಧಿಕೃತ ಆದೇಶವನ್ನು ಇಂದು ಹೊರಡಿಸಲಾಗಿದೆ. ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹೊರಡಿಸಿರುವಂತ ಆದೇಶದಲ್ಲಿ ದಿನಾಂಕ 01-07-2022ರಿಂದಲೇ ವೇತನ ಜಾರಿಗೊಳಿಸಿ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವಂತೆ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ.
ರಾಜ್ಯ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹೊರಡಿಸಿರುವಂತ ಆದೇಶದಲ್ಲಿ, ದಿನಾಂಕ: 19.11.2022ರ ಆದೇಶದಲ್ಲಿ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತಂತೆ ತನ್ನ ವರದಿಯ ಸಂಪುಟ-1 ನ್ನು ಸಲ್ಲಿಸಿರುತ್ತದೆ. 7ನೇ ರಾಜ್ಯ ವೇತನ ಆಯೋಗದ ಸಂಪುಟ- ರ ವರದಿಯಲ್ಲಿನ ಶಿಫಾರಸ್ಸುಗಳನ್ನು ಸರ್ಕಾರವು ಪರಿಗಣಿಸಿರುತ್ತದೆ. ಅದರಂತೆ, ಈ ಕೆಳಕಂಡ ಆದೇಶಗಳನ್ನು ಹೊರಡಿಸಿದೆ ಅಂತ ತಿಳಿಸಿದ್ದಾರೆ.
ಮುಖ್ಯ ವೇತನ ಶ್ರೇಣಿ ಮತ್ತು ಸ್ಥಾಯಿ ವೇತನ ಶ್ರೇಣಿಗಳ ಪರಿಷ್ಕರಣೆ ಬಗ್ಗೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ರಾಜ್ಯ ಸರ್ಕಾರವು ಅಂಗೀಕರಿಸಿರುತ್ತದೆ. ಅದರಂತೆ, 7ನೇ ರಾಜ್ಯ ವೇತನ ಆಯೋಗವು ಶಿಫಾರಸ್ಸು ಮಾಡಿರುವ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ದಿನಾಂಕ: 01.07.202280 ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲು ಸರ್ಕಾರವು ಹರ್ಷಿಸುತ್ತದೆ ಎಂದಿದ್ದಾರೆ.
7ನೇ ವೇತನ ಆಯೋಗದ ಶಿಫಾರಸ್ಸಿನ ಅನುಷ್ಠಾನದಂತೆ ಯಾರಿಗೆ ಎಷ್ಟು ಸಂಬಳ? ಇಲ್ಲಿದೆ ಡೀಟೆಲ್ಸ್
ಹಕ್ಕುಗಳಿಗಾಗಿ ಹೋರಾಟ ಎಷ್ಟು ಮುಖ್ಯವೋ ನಿರ್ಲಕ್ಷ ಮಾಡದೆ ಕರ್ತವ್ಯ ನಿರ್ವಹಿಸುವುದೂ ಅಷ್ಟೇ ಮುಖ್ಯ: ಪ್ರಿಯಾಂಕ್ ಖರ್ಗೆ
BREAKING : ಅಸಹಜ ಲೈಂಗಿಕ ದೌರ್ಜನ್ಯ ಕೇಸ್ : 2ನೇ ಪ್ರಕರಣದಲ್ಲೂ ಸೂರಜ್ ರೇವಣ್ಣಗೆ ಜಾಮೀನು ಮಂಜೂರು!