ಶಿವಮೊಗ್ಗ : ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಹೊಳೆಯಲ್ಲಿ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುಗ್ವೆ ಗ್ರಾಮದಲ್ಲಿ ನಡೆದಿದೆ.ಆದರೆ ಪೊಲೀಸರ ಸಮಯ ಪ್ರಜ್ಞೆಯಿಂದ ಮೂವರು ಬದುಕುಳಿದಿದ್ದಾರೆ.
ಹೌದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಣಲೇಕೊಪ್ಪ ನಿವಾಸಿಗಳಾದ ತಾಯಿ ಸಂಗೀತ (33) ಮಕ್ಕಳಾದ ಪ್ರೀತಿ (13) ಪ್ರಜ್ವಲ್ (9) ಎಂದು ತಿಳಿದುಬಂದಿದೆ. ಈ ವೇಳೆ ತಳಕ್ಕೆ ಬಂದ ಪೊಲೀಸರು ತಾಯಿ ಹಾಗೂ ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಕೌಟುಂಬಿಕ ಕಲಹದಿಂದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗುತ್ತಿದೆ.
ಆತ್ಮಹತ್ಯೆಗೆ ಯತ್ನಿಸಿದ ಅವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಣಲೇಕೊಪ್ಪ ನಿವಾಸಿಗಳು ಎಂದು ತಿಳಿದುಬಂದಿದೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿ ಮಹಿಳೆ ಮತ್ತು ಮಕ್ಕಳನ್ನು ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.