ಬೆಂಗಳೂರು : KIADBಗೆ ಭೂ ಸ್ವಾಧೀನ ವಿರೋಧಿಸಿ ಇಂದು ಬೆಂಗಳೂರಿನ ದೇವನಹಳ್ಳಿಯಲ್ಲಿ ರೈತರು ಜಾಥಾ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಲು ರೈತರು ಜಾಥಾ ನಡೆಸಿದರು. ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದ ರೈತರನ್ನು ಪೊಲೀಸರು ಇದೆ ವೇಳೆ ವಶಕ್ಕೆ ಪಡೆದುಕೊಂಡ ಘಟನೆ ನಡೆಯಿತು.
ಕೆಐಎಡಿಬಿ ಗೆ ಭೂ ಸ್ವಾಧೀನ ವಿರೋಧಿಸಿ ಇಂದು ರೈತರು ಜಾಥಾ ನಡೆಸಿದರು. ಸಿಎಂ ಮನೆಗೆ ಮುತ್ತಿಗೆ ಹಾಕಲು ರೈತರು ಹೊರಟಿದ್ದರು.ಈ ವೇಳೆ ರೈತರು ಮತ್ತು ಪೊಲೀಸರ ನಡುವೆ ಈ ವೇಳೆ ಮಾತಿನ ಚಕಮಕಿ ನಡೆದಿದೆ. ತಕ್ಷಣ ಅನ್ನದಾತರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಬಿಎಂಟಿಸಿ ಬಸ್ಗಳಲ್ಲಿ ಪೊಲೀಸರು ರೈತರನ್ನು ಕರೆದುಕೊಂಡು ಹೋಗಿದ್ದಾರೆ,
ಈ ವೇಳೆ ಸ್ಥಳಕ್ಕೆ ಆಗಮಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಬಿ ಆರ್ ಪಾಟೀಲ್ ರೈತರ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ಬಿ ಆರ್ ಪಾಟೀಲ್ ಮುಂದೆ ಕೂಡ ರೈತರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ವಶಕ್ಕೆ ಪಡೆದ ರೈತರನ್ನು ಕರೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.