ಬೆಳಗಾವಿ : ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸಹೋದರ ಸಂಬಂಧಿಕರ ಮಕ್ಕಳ ನಡುವೆ ಗಲಾಟೆ ನಡೆದಿದ್ದು ಈ ವೇಳೆ ಪರಸ್ಪರ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡು ಇಬ್ಬರು ಜೀವ ತೆತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೋತವಡಿ ಗ್ರಾಮದಲ್ಲಿ ನಡೆದಿದೆ.
ಹೌದು ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸಹೋದರರಾದ ಹಣಮಂತ ರಾಮಚಂದರ ಖೋತ (35) ಖಂಡೋಭಾ ತಾನಾಜಿ ಖೋತ (30) ಮೃತಪಟ್ಟ ಸಹೋದರರು ಎಂದು ತಿಳಿದುಬಂದಿದೆ.ಭೂ ವಿವಾದ ಹಿನ್ನೆಲೆಯಲ್ಲಿ ಸಹೋದರ ಸಂಬಂಧಿಕರ ಮಕ್ಕಳ ನಡುವೆ ಗಲಾಟೆ ನಡೆದಿತ್ತು. ತಡರಾತ್ರಿ ನಡೆದ ಗಲಾಟೆಯಲ್ಲಿ ಒಬ್ಬರಿಗೊಬ್ಬರು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ.
ಪರಸ್ಪರ ಹೊಡೆದಾಟದಲ್ಲಿ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಮಹಾರಾಷ್ಟ್ರದ ಮೀರಜ್ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.