ಬೆಂಗಳೂರು: ರಾಜ್ಯದಲ್ಲಿ ಟಿಕೆಟ್ ಇಲ್ಲದೇ ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸಿದಂತ ಪ್ರಯಾಣಿಕರಿಗೆ ಕೆ ಎಸ್ ಆರ್ ಟಿಸಿ ಬಿಗ್ ಶಾಕ್ ನೀಡಿದೆ. ಟಿಕೇಟ್ ಇಲ್ಲದೆ ಪ್ರಯಾಣಿಸಿದ 3610 ಪ್ರಯಾಣಿಕರಿಗೆ ದಂಡ ವಿಧಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ಜೂನ್ -2024 ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43126 ವಾಹನಗಳನ್ನು ತನಿಖೆಗೊಳಪಡಿಸಿ 3522 ಪ್ರಕರಣಗಳನ್ನು ಪತ್ತೆಹಚ್ಚಿ, 3610 ಟಿಕೇಟ್ ರಹಿತ ಪ್ರಯಾಣಿಕರಿಂದ 5,97,517/-ರೂ ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿರುತ್ತಾರೆ ಎಂದು ಹೇಳಿದೆ.
ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 82,946/- ರೂ ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಅಂತ ತಿಳಿಸಿದೆ.
ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಈ ಮೂಲಕ ಪ್ರಯಾಣಿಕರಲ್ಲಿ ಕೋರಿದೆ.