ಶಿವಮೊಗ್ಗ : ತೋಟಗಾರಿಕೆ ಇಲಾಖೆಯ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ವಿಮೆ ನೊಂದಣಿಗೆ ಸಂಬಂಧಿಸಿದಂತೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಸಭೆಯನ್ನು ನಡೆಸಲಾಗಿದ್ದು, ಜಿಲ್ಲೆಯಲ್ಲಿ ಫಸಲು ನೀಡುತ್ತಿರುವ ಅಡಿಕೆ, ಮಾವು, ಕಾಳುಮೆಣಸು ಮತ್ತು ಶುಂಠಿ ಬೆಳೆಗಳಿಗೆ ವಿಮೆ ಯೋಜನೆಯಡಿ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ.
ಜಿಲ್ಲೆಯಲ್ಲಿ ಅಡಿಕೆ ಪ್ರಮುಖ ಬೆಳೆಯಾಗಿದ್ದು, ಬೆಳೆ ಸಮೀಕ್ಷೆಯಲ್ಲಿ ರೈತರು ಬೆಳೆದಿರುವ ಅಡಿಕೆ ಬೆಳೆ ಕಂಡುಬರದಿದ್ದರೆ ಅಂತಹ ರೈತರು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ನೋಂದಾಯಿಸಲು ಸಾಧ್ಯವಾಗುತ್ತಿಲ್ಲ.
ಈ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು ಬೆಳೆ ಸಮೀಕ್ಷೆ ಪ್ರಕಾರ ಹಿಂದಿನ ಎರಡು ವರ್ಷಗಳಲ್ಲಿ ಅಡಿಕೆ ಬೆಳೆ ಕಂಡುಬಂದರೆ ಅಥವಾ ಕನಿಷ್ಟ ಒಂದು ವರ್ಷದಲ್ಲಿಯಾದರೂ ಬೆಳೆ ಸಮೀಕ್ಷೆಯಲ್ಲಿ ಅಡಿಕೆ ಬೆಳೆ ಕಂಡುಬಂದರೆ ಅಂತಹ ಪ್ರಕರಣಗಳನ್ನು ಪರಿಗಣಿಸಿ ಸಂರಕ್ಷಣೆ ತಂತ್ರಾಂಶದಲ್ಲಿ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂಬ ಮಾಹಿತಿಯನ್ನು ನೀಡಿ, ಜಿಲ್ಲೆಯ ಎಲ್ಲಾ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ರಾಜ್ಯ ಸರ್ಕಾರದಿಂದ ‘ಪರಿಶಿಷ್ಟ ಸಮುದಾಯ’ದವರು ಸಲ್ಲಿಸಿರುವ 408 ಪ್ರಸ್ತಾವಕ್ಕೆ ಅನುಮೋದನೆ
ರೈತ ಸ್ನೇಹಿ, ತೆರಿಗೆ ಹೊರೆ ರಹಿತ, ಸರ್ವ ಜನಕೇಂದ್ರಿತ, ಸುಭದ್ರ ಬಜೆಟ್: ಆರ್.ಅಶೋಕ್ | Union Budget 2024