ಶಿವಮೊಗ್ಗ : ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳಿಗೆ ಸಹಾಯಧನ ಕಾರ್ಯಕ್ರಮದಡಿ 3ಹೆಚ್ಪಿ, 5 ಹೆಚ್ಪಿ ಮತ್ತು ಮೇಲ್ಪಟ್ಟು ಸೋಲಾರ್ ಪಂಪ್ಸೆಟ್ಗಳಿಗೆ ಇಲಾಖೆಯಿಂದ ನಿಗದಿಪಡಿಸಿದ ದರದಂತೆ ಸಹಾಯಧನವನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ರೈತರು ಇಲಾಖೆಯಿಂದ ಅನುಮೋದಿತ ಎಂಪ್ಯಾನಲ್ ಸಂಸ್ಥೆಗಳಿಂದ ಸೋಲಾರ್ ಪಂಪ್ಸೆಟ್ಗಳನ್ನು ಅಳವಡಿಸಿಕೊಳ್ಳಬಹುದಾಗಿದ್ದು, ಶಿವಮೊಗ್ಗ ತಾಲೂಕಿನ ಸಾಮಾನ್ಯ ವರ್ಗಕ್ಕೆ -3, ಪ.ಜಾ. ವರ್ಗದವರಿಗೆ 5 ಮತ್ತು ಪ.ಪಂ.ದವರಿಗೆ- 1 ಸೋಲಾರ್ ಪಂಪ್ಸೆಟ್ಗಳಿಗೆ ಅವಕಾಶವಿದ್ದು, ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ಹೋಬಳಿ ರೈತರ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ತಾಲೂಕು ತೋಟಗಾರಿಕೆ ಇಲಾಖೆಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 09ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಆಯಾ ಹೋಬಳಿ ರೈತರ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಜಿಲ್ಲಾ ತೋಟಗಾರಿಕೆ ಇಲಾಖೆ ದೂ.ಸಂ.:08182-279415 ನ್ನು ಸಂಪರ್ಕಿಸುವುದು.
ಸಾಗರದಲ್ಲಿ ಶಾಸಕರ ಸೂಚನೆ ಬೆನ್ನಲ್ಲೇ ‘ಕೆಳದಿ PDO ಅಷ್ಪಕ್ ಅಹಮದ್’ ಅಲರ್ಟ್: ರಸ್ತೆಯಲ್ಲಿ ನಿಂತಿದ್ದ ‘ನೀರು ಕ್ಲಿಯರ್’
ರೈತರ ಗಮನಕ್ಕೆ: ಹವಾಮಾನ ಆಧಾರಿತ ಬೆಳೆ ವಿಮೆ ನೊಂದಾಯಿಸಲು ಅರ್ಜಿ ಆಹ್ವಾನ
ರೈತ ಸ್ನೇಹಿ, ತೆರಿಗೆ ಹೊರೆ ರಹಿತ, ಸರ್ವ ಜನಕೇಂದ್ರಿತ, ಸುಭದ್ರ ಬಜೆಟ್: ಆರ್.ಅಶೋಕ್ | Union Budget 2024