ಚಿತ್ರದುರ್ಗ : ಚಿತ್ರದುರ್ಗದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ವಿದ್ಯುತ್ ಸ್ಪರ್ಶಿಸಿ 12 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಹನುಮಾಪುರದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ರಾಮಚಂದ್ರ (12) ಸಾವನ್ನಪ್ಪಿದ್ದಾನೆ.
ವಿದ್ಯುತ್ ಕಂಬದಲ್ಲಿ ಸಿಲುಕಿದ್ದ ಪಾರಿವಾಳ ರಕ್ಷಣೆಗೆ ವಿದ್ಯುತ್ ಕಂಬ ಏರಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿದ್ದಾನೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.