ನವದೆಹಲಿ: ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬುಧವಾರ ಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಸುದ್ದಿ ಸಂಸ್ಥೆ ಎಎನ್ಐ ಹಂಚಿಕೊಂಡಿರುವ ವೀಡಿಯೊದಲ್ಲಿ, ಆಕಾಶದಲ್ಲಿ ಕಪ್ಪು ಹೊಗೆ ಎತ್ತರಕ್ಕೆ ಏರುತ್ತಿರುವುದು ಕಂಡುಬಂದಿದೆ.
ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಘಟನೆಯಲ್ಲಿ ಯಾವುದೇ ಸಾವುನೋವುಗಳು ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.
ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ