ಬೆಂಗಳೂರು : ಸರ್ಕಾ ಹುದ್ದೆಗಳಿಗಾಗಿ ಕಾಯುತ್ತಿರುವ ಆಕಾಕ್ಷಿಗಳಿಗೆ ಆರೋಗ್ಯ ಇಲಾಖೆ ಸಚಿವರು ಸಿಹಿ ಸುದ್ದಿ ನೀಡಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಗಮನಹರಿಸುತ್ತೇವೆ. 2 ವರ್ಷಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡ್ತೇವೆ ಎಂದು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಈಗಾಗಲೇ ಆರೋಗ್ಯ ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು ಎರಡು ವರ್ಷಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರುತ್ತೇವೆ ಅದಾದ ಬಳಿಕ ಆರೋಗ್ಯ ಇಲಾಖೆಯಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಜೀವ ದಿನೇಶ್ ಗುಂಡೂರಾವ್ ತಿಳಿಸಿದರು.
ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ. ಇನ್ಸ್ಪೆಕ್ಷನ್ ಆಫೀಸರ್, ಪಿಹೆಚ್ಸಿಗಳಲ್ಲಿ ಸಿಬ್ಬಂದಿ ಸೇರಿದಂತೆ ಇನ್ನೂ ಹಲವು ಹುದ್ದೆಗಳು ಖಾಲಿ ಇವೆ. ಹಾಗಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಗಮನಹರಿಸುತ್ತೇವೆ. ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡುತ್ತಿದ್ದೇವೆ. 2 ವರ್ಷಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡ್ತೇವೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.