ನವದೆಹಲಿ : ಕರ್ನಾಟಕದ ನಂತರ, ಪಶ್ಚಿಮ ಬಂಗಾಳ ವಿಧಾನಸಭೆಯು ರಾಜ್ಯದಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ರದ್ದುಗೊಳಿಸುವ ನಿರ್ಣಯವನ್ನು ಅಂಗೀಕರಿಸಿತು ಮತ್ತು ಅದರ ಬದಲಿಗೆ ವೈದ್ಯಕೀಯ ಅಧ್ಯಯನವನ್ನ ಮುಂದುವರಿಸಲು ಬಯಸುವ ವಿದ್ಯಾರ್ಥಿಗಳಿಗೆ ಹೊಸ ಪ್ರವೇಶ ಪರೀಕ್ಷೆಯನ್ನು ಜಾರಿಗೆ ತರಲಿದೆ.
ಮುಕ್ತ ಮತ್ತು ನ್ಯಾಯಸಮ್ಮತ ಪರೀಕ್ಷೆಯನ್ನು ನಡೆಸಲು ಅಸಮರ್ಥವಾಗಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಯನ್ನ ನಿರ್ಣಯವು ಖಂಡಿಸುತ್ತದೆ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದಲ್ಲಿ ಜಂಟಿ ಪ್ರವೇಶ ಪರೀಕ್ಷೆಗಳನ್ನ ನಡೆಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತದೆ.
ಅಂದ್ಹಾಗೆ, ಈಗಾಗಲೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸುವ ಕೇಂದ್ರೀಯ ಪರೀಕ್ಷೆಯನ್ನ ರದ್ದುಗೊಳಿಸುವ ನಿರ್ಣಯಕ್ಕೆ ಕರ್ನಾಟಕ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ.
BREAKING ; ಬಿಹಾರ ವಿಧಾನಸಭೆಯಲ್ಲಿ ‘ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಮಸೂದೆ’ ಅಂಗೀಕಾರ
ನಾನು ಯಾವುದೇ ಕಾರಣಕ್ಕೆ ‘ನಟ ದರ್ಶನ್’ ಕೇಸಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ
ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ‘ಡಿಸಿಎಂ ಡಿ.ಕೆ ಶಿವಕುಮಾರ್’ ಭೇಟಿಯಾಗಿದ್ದು ಏಕೆ ಗೊತ್ತೇ?