ಬೆಳಗಾವಿ : ಬೆಳಗಾವಿ ಜಿಲ್ಲೆಯ ಆದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು ಇದೀಗ ಬೆಳಗಾವಿಯ ಖಾನಾಪುರ ಬೈಲಹೊಂಗಲ ಹಾಗೂ ಕಿತ್ತೂರು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ಮತ್ತು ನಾಡಿದ್ದು ಎರಡು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಹೌದು ಬೆಳಗಾವಿ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬೈಲಹೊಂಗಲ, ಕಿತ್ತೂರು ತಾಲೂಕಿನ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದ್ದು, ಅದೆ ರೀತಿ ಬೆಳಗಾವಿ ಖಾನಾಪುರ ತಾಲೂಕು, ಬೈಲಹೊಂಗಲ ಹಾಗೂ ಕಿತ್ತೂರು ತಾಲೂಕಿನಲ್ಲಿ ಪದವಿ ಪೂರ್ವ ಕಾಲೇಜುಗಳಿಗೂ ಕೂಡ ರಜೆ ಘೋಷಿಸಲಾಗಿದೆ ನಾಳೆ ನಾಡಿದ್ದು ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.