ಆನೇಕಲ್: ಪುರಸಭೆ ಸದಸ್ಯನೊಬ್ಬನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವಂತ ಘಟನೆ ಆನೇಕಲ್ ಹೊರವಲಯದ ಹೊಸೂರಿನಲ್ಲಿ ನಡೆದಿದೆ.
ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಲ್ಲೂಕಿನ ಪುರಸಭೆಯ ಸದಸ್ಯ ರವಿ ಆಲಿಯಾಸ್ ಸ್ಕ್ರಾಪ್ ರವಿ ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಸಿಕ್ಕ ಸಿಕ್ಕ ಕಡೆ ಮಚ್ಚು ಬೀಸಿ ಕೊಲೆಗೈದಿರುವಂತ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಹಳೇ ವೈಷಮ್ಯದಿಂದ ಕೊಲೆ ಮಾಡಿರೋದಾಗಿ ಹೇಳಲಾಗುತ್ತಿದೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುರಸಭೆ ಸದಸ್ಯ ರವಿ ಕೊಲೆ ವಿಷಯ ತಿಳಿದು ಅವರ ಶವವಿರುವಂತ ಆಸ್ಪತ್ರೆಯ ಮುಂದೆ ಸಂಬಂಧಿಕರು, ಅಭಿಮಾನಿಗಳು ಜಮಾಯಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
‘KSET ಪರೀಕ್ಷೆ-2023’ ಉತ್ತೀರ್ಣರಾದ ಅಭ್ಯರ್ಥಿಗಳ ಗಮನಕ್ಕೆ: ನಿಮ್ಮ ಮನೆಗೆ ಬರಲಿದೆ ‘ಪ್ರಮಾಣ ಪತ್ರ’ | KSET Exam
ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ‘ಗ್ರಾಮಠಾಣ’ ಒಳಗಿನ, ಹೊರಗಿನ ‘ಆಸ್ತಿ ಅಳತೆ’ಗೆ ಅವಕಾಶ