ಬೆಂಗಳೂರು : ವಾಲ್ಮೀಕಿ ನಿಗಮದ ಹಗರಣ ಹಾಗೂ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಿಂದ ಅಹೋರಾತ್ರಿ ಧರಣಿಗೆ ಸಂಬಂಧಿಸಿದಂತೆ ನಿನ್ನೆ ರಾತ್ರಿಯಿಂದ ಬಿಜೆಪಿ ಜೆಡಿಎಸ್ ನಾಯಕರು ಸಿಎಂ ಸಿದ್ದರಾಮಯ್ಯ ವಿರುದ್ಧ ಭಜನೆ, ಜಾಗರಣೆ ನಡೆಸಿದರು. ಬೆಳಗ್ಗೆ ಯೋಗ ವ್ಯಾಯಾಮ ಕೂಡ ಮಾಡಿದರು. ಈ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾಧ್ಯಮಗಳೊಂದಿಗೆ ಮಾತನಾಡಿದರು.
ಇನ್ನೂ ಮುಡಾ ಹಗರಣಕ್ಕೆ ಚರ್ಚೆಗೆ ಅವಕಾಶ ನೀಡುವುದರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅಧಿವೇಶನವನ್ನು ಮುಂದುವರೆಸುವುದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಅಧಿವೇಶನ ಮುಂದುವರೆಸುವುದು ಬಿಡುವುದು ರಾಜ್ಯ ಸರ್ಕಾರಕ್ಕೆ ಸಂಬಂಧಪಟ್ಟಿದ್ದು. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿವೇಶನ ಮುಂದುವರಿಸಬೇಕು ಬೇಡವೋ ಎಂಬುದರ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ.ನಾವು ಕೇವಲ ಟೀಚರ್ ಇದ್ದಂಗೆ ರಾಜ್ಯ ಸರ್ಕಾರ ಹೇಳಿದಂತೆ ನಾವು ಕೇಳುತ್ತೇವೆ ಎಂದು ಬಸವರಾಜ್ ಹೊರಟ್ಟಿ ತಿಳಿಸಿದರು.
ಇನ್ನೂ ಮುಡಾ ಹಗರಣದ ಕುರಿತು ಚರ್ಚೆಗೆ ಅವಕಾಶ ಕೋರಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ನಿಯಮದ ಪ್ರಕಾರ ಸೂಕ್ತ ವಿಷಯ ಇದ್ದರೆ ಚರ್ಚೆಗೆ ಅವಕಾಶ ನೀಡುತ್ತೇವೆ ಮೂಡ ವಿಚಾರ ಸೂಕ್ತ ಅಲ್ಲ ಅನ್ನೋ ಕಾರಣಕ್ಕೆ ಚರ್ಚೆಗೆ ಅವಕಾಶ ನೀಡಿಲ್ಲ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿರುವುದರಿಂದ ಚರ್ಚೆಗೆ ಅವಕಾಶ ನೀಡಿಲ್ಲ ನಾವು ಧರಣಿ ಮಾಡದಂತೆ ಮನವಿ ಮಾಡುತ್ತೇವೆ ಧರಣಿ ಮಾಡುವ ಹಕ್ಕು ಎಲ್ಲರಿಗೂ ಇದೆ ಹಿಂದೆ ನಾವು ಕೂಡ ಧರಣಿ ನಡೆಸಿದ್ದೆವು ಎಂದು ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದರು.