ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದಲ್ಲಿ ಕೇವಲ ಸಿಎಂ ಸಿದ್ದರಾಮಯ್ಯ ಮಾತ್ರವಲ್ಲ ಬಿಜೆಪಿಯವರ ಪಾತ್ರವೂ ಇದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಮಾತ್ರವಲ್ಲ, ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷದವರು ಭಾಗಿಯಾಗಿದ್ದಾರೆ. ಇದೆ. ಸಿಎಂ ಸಿದ್ದರಾಮಯ್ಯ ಎಲ್ಲ ಪಕ್ಷದವರನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಎಲ್ಲರ ಬಣ್ಣ ಬಯಲಾಗಬೇಕು.ಪಾದಯಾತ್ರೆ ಎಲ್ಲ ನಾಟಕ ಎಂದು ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದ ಯತ್ನಾಳ್ ಎಂದು ಹೇಳಿದ್ದಾರೆ.
ಇನ್ನೂ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುತ್ತೇವೆ. ಮೂಡ ಹಗರಣದ ಚರ್ಚೆಗೆ ಇಂದು ಕೂಡ ಮನವಿ ಮಾಡುತ್ತೇವೆ ಈ ಒಂದು ಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸಹ ಭಾಗಿಯಾಗಿದ್ದಾರೆ ಅಧಿವೇಶನದಲ್ಲಿ ಚರ್ಚೆಯಾದರೆ ಸತ್ಯ ಸತ್ಯತೆ ಹೊರಬರಲಿದೆ. ಈ ಹಿಂದೆ ಅರ್ಕಾವತಿ ಹಗರಣ ಆಗಿದ್ದಾಗ ಸಿಎಂ ಸಿದ್ದರಾಮಯ್ಯ ಧರಣಿ ಮಾಡಿದ್ದರು. ಹಾಗಾಗಿ ನಾವು ಮೈಸೂರಿಗೆ ಪಾದಯಾತ್ರೆ ಮಾಡುತ್ತೇವೆ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದ್ದಾರೆ.