ಮಂಗಳೂರು : ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮಹಾಮಳೆಗೆ ಇದೀಗ ಮತ್ತೊಂದು ಬಲಿಯಾಗಿದ್ದು, ಮಂಗಳೂರು ಜಿಲ್ಲೆಯಲ್ಲಿ ಮಳೆಗೆ ಮನೆಗೋಡೆ ಕುಸಿದು ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ಭಾರೀ ಮಳೆಗೆ ಮನೆಯ ತಡೆಗೋಡೆ ಕುಸಿದು ಬಾಲಕ ಶೈಲೇಶ (17) ಸಾವನ್ನಪ್ಪಿರುವ ಘಟನೆ ನಡೆದಿದೆ.
ಇನ್ನು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಆರು ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.