ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಆರು ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಇಂದು ಜಿಲ್ಲೆಯ ಆರು ತಾಲೂಕುಗಳಾದ ಮೂಡಿಗೆರೆ, ಕಳಸ, ಶೃಂಗೇರಿ, ಎನ್.ಆರ್ ಪುರ, ಕೊಪ್ಪ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷೀಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.