ಮಂಗಳೂರು : ಮಂಗಳೂರಿನ ಜೈಲಿನ ಮೇಲೆ ಇಂದು ನಸುಕಿನ ಜಾವದಲ್ಲಿ ಸುಮಾರು ಏಕಕಾಲದಲ್ಲಿ 150 ಪೊಲೀಸರು ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದ್ದು ಗಾಂಜಾ, ಡ್ರಗ್ಸ್, ಮೊಬೈಲ್ ಫೋನ್ಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ.
ಹೌದು ಇಂದು ಬೆಳ್ಳಂ ಬೆಳಿಗ್ಗೆ ಮಂಗಳೂರು ಜೈಲಿನ ಮೇಲೆ ದಾಳಿ ಮಾಡಿ ಕಾರ್ಯಾಚರಣೆ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಗಾಂಜಾ ಮತ್ತು ಡ್ರಗ್ಸ್ ಪತ್ತೆಯಾಗಿದೆ. ಜೊತೆಗೆ ಮೊಬೈಲ್ ಫೋನ್ಗಳು, ಡಿವೈಸ್ಗಳು ಪತ್ತೆಯಾಗಿವೆ. ಮಂಗಳೂರು ಪೊಲೀಸರು ಏಕಾಏಕಿ ಮಂಗಳೂರು ಜೈಲಿನ ಮೇಲೆ ದಾಳಿ ಮಾಡಿದ್ದು ಅಲ್ಲಿ ನಡೆಯುತ್ತಿದ್ದ ಅಕ್ರಮ ಬಯಲಾಗಿದೆ.
ದಾಳಿ ವೇಳೆ ಇಪ್ಪತ್ತೈದು ಮೊಬೈಲ್, ಒಂದು ಬ್ಲೂ ಟೂತ್ ಡಿವೈಸ್, ಐದು ಇಯರ್ ಫೋನ್, ಒಂದು ಪೆನ್ ಡ್ರೈವ್, ಐದು ಚಾರ್ಜರ್, ಒಂದು ಕತ್ತರಿ ಸೇರಿದಂತೆ ವಿವಿಧ ವಸ್ತುಗಳು ಸಿಕ್ಕಿದ್ದು ಪೊಲೀಸರು ಆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಜೈಲು ಖೈದಿಗಳ ಜೊತೆಗಿದ್ದ ಗಾಂಜಾ ಮತ್ತು ಡ್ರಗ್ಸ್ ಪ್ಯಾಕೇಟ್ಗಳನ್ನು ಕೂಡಾ ವಶಕ್ಕೆ ಪಡೆಯಲಾಗಿದೆ.ಡ್ರಗ್ಸ್, ಗಾಂಜಾ ಪತ್ತೆಯ ಹಿನ್ನಲೆಯಲ್ಲಿ ತನಿಖೆಗೆ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ಆದೇಶ ಹೊರಡಿಸಿದ್ದಾರೆ.