ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲಿ ಜೈಲುಪಾಲಾಗಿರುವ ನಟ ದರ್ಶನ್ ಅವರನ್ನು ಜೈಲಿನಿಂದ ಹೊರಗೆ ತರಲು ಸತತ ಪ್ರಯತ್ನ ನಡೆಸಿರುವ ದರ್ಶನ್ ಪತ್ನಿ ವಿಜಯಲಕ್ಷ್ಮೀ ನಿನ್ನೆ ಡಿಸಿಎಂ ಡಿ.ಕೆ. ಶಿವಕುಮಾರ್ ಎದುರು ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ.
ನಿನ್ನೆಯಷ್ಟೇ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ಸಹೋದರ ದಿನಕರ ತೂಗದೀಪ ಭೇಟಿಯಾಗಿದ್ದರು. ಭೇಟಿ ವೇಳೆ ತಮ್ಮ ಮಗನ ಶಾಲೆ ಸೇರ್ಪಡೆ ಜೊತೆಗೆ ನಟ ದರ್ಶನ್ ವಿಚಾರವನ್ನು ಹೇಳಿಕೊಂಢು ವಿಜಯಲಕ್ಷ್ಮೀ ಡಿಕೆಶಿ ಎದುರು ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ. ಮಗನ ವಿಚಾರದ ಜೊತೆಗೆ ನಟ ದರ್ಶನ್ ಬೇಲ್ ಹಾಗೂ ಊಟದ ವಿಚಾರವಾಗಿ ಮಾತನಾಡಿದ್ದು, ಈ ಬಗ್ಗೆ ಸಹಾಯ ಮಾಡುವಂತೆ ಕಣ್ಣೀರು ಹಾಕಿದ್ದಾರೆ.
ಇನ್ನು ನಟ ದರ್ಶನ್ ಗೆ ಈ ಸಂಬಂಧ ಯಾರೂ ಅಪೋರ್ಟ್ ಮಾಡುತ್ತಿಲ್ಲ. ಹೀಗಾಗಿ ದರ್ಶನ್ ಒಬ್ಬಂಟ್ಟಿಯಾಗಿದ್ದಾರೆ ಎಂದು ಕಣ್ಣೀರು ಹಾಕಿದ್ದಾರೆ. ಇನ್ನೂ ಇಂದು ವಿಜಯಲಕ್ಷ್ಮೀ ಅವರು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.