ಬೆಳಗಾವಿ : ಬೆಳಗಾವಿಯಲ್ಲಿ ಒಂದು ಅಮಾನವೀಯ ಘಟನೆ ನಡೆದಿದ್ದು ಜೀವಂತ ಇರುವ ಮಹಿಳೆಯನ್ನು ಜನರು ಆಸ್ಪತ್ರೆಗೆ ಕೆಟ್ಟದ ಮೇಲೆ ಕರೆದುಕೊಂಡು ಬಂದಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅಮಗಾಂವ್ ಗ್ರಾಮದಲ್ಲಿ ನಡೆದಿದೆ.
ಆದರೆ ಅನಾರೋಗ್ಯ ಪೀಡಿತ ಹರ್ಷದಾ ಘಾಡಿ(38) ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಐದು ದಿನಗಳ ಹಿಂದೆ ಸುರಿಯುತ್ತಿರುವ ಭಾರೀ ಮಳೆಯಲ್ಲೇ ನಾಲ್ಕು ಕಿಮೀ ಮಹಿಳೆಯನ್ನ ಹೊತ್ತು ಕಾಲ್ನಡಿಗೆಯಲ್ಲೇ ಆಸ್ಪತ್ರೆಗೆ ಕರೆತಂದಿದ್ದರು. ಇದಕ್ಕೂ ಮುನ್ನ 108 ಆಂಬುಲೆನ್ಸ್‌ಗೆ ಕರೆ ಮಾಡಿದ್ದ ಗ್ರಾಮಸ್ಥರು, ಆದರೆ ಗ್ರಾಮಕ್ಕೆ ಸಮರ್ಪಕ ರಸ್ತೆ ಇರದ ಹಿನ್ನೆಲೆ ಬರಲಾಗಿಲ್ಲ.
ಹೀಗಾಗಿ ಕಾಲ್ನಡಿಗೆಯಲ್ಲಿ ಆನಾರೋಗ್ಯಪೀಡಿತ ಮಹಿಳೆಯನ್ನು ಚಟ್ಟದ ಮೇಲೆ ಹೊತ್ತು ಆಸ್ಪತ್ರೆಗೆ ಕರೆತಂದಿದ್ದರು. ಆಂಬುಲೆನ್ಸ್ ಮೂಲಕ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಮಹಿಳೆಯನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಹಿಳೆ ಮೃತಪಟ್ಟಿದ್ದಾಳೆ.