ಕಲಬುರ್ಗಿ: ಜಿಲ್ಲೆಯಲ್ಲಿ ಬೆಚ್ಚಿ ಬೀಳುಸುವಂತೆ ರಾಜ್ಯದಲ್ಲೇ ಪೈಶಾಚಿಕ ಕೃತ್ಯ ಎನ್ನುವಂತೆ ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿರುವಂತ ಶಂಕೆ ವ್ಯಕ್ತವಾಗಿದೆ.
ಕಲಬುರ್ಗಿ ಜಿಲ್ಲೆಯ ಅಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ ವೆಸಗಿರೋ ಶಂಕೆ ವ್ಯಕ್ತವಾಗಿದೆ. ಹೀಗೆ ಪೈಶಾಚಿಕ ಕೃತ್ಯಕ್ಕೆ ಒಳಗಾಗಿದ್ದಂತ ಪುಟ್ಟ ಕಂದಮ್ಮನನ್ನು ಪಾವಿಗಳು ಕೊಲೆ ಮಾಡಿರೋದಾಗಿ ಹೇಳಲಾಗುತ್ತಿದೆ.
ಪೈಶಾಚಿಕ ಕೃತ್ಯಕ್ಕೆ ಒಳಗಾಗಂತ ಮಗುವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ದುರುಶರ ಅಟ್ಟ ಹಾಸದ ಕುರುಹುಗಳು ಪತ್ತೆಯಾಗಿವೆ ಎನ್ನಲಾಗುತ್ತಿದೆ. ಈ ಸಂಬಂಧ ನರೋಣಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ, ಕೊಲೆ ಪ್ರಕರಣ ದಾಖಲಾಗಿದೆ.