ಬೆಂಗಳೂರು: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET)ಯನ್ನು ರದ್ದುಪಡಿಸಿ ಹಳೆಯ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವ್ಯವಸ್ಥೆಯನ್ನೇ ಮುಂದುವರೆಸುವ ಮಹತ್ವದ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತ್ತು. ಈ ಬಳಿಕ ವಿಧಾನಪರಿಷತ್ತಿನಲ್ಲೂ ಮಂಡನೆಯಾಗಿದ್ದಂತ ನೀಟ್ ವಿರುದ್ಧದ ನಿರ್ಣಯಕ್ಕೆ ಅಂಗೀಕಾರ ದೊರೆತಿದೆ.
ನೀಟ್ ಪರೀಕ್ಷೆಯನ್ನು ರದ್ದು ಮಾಡಿ ಕರ್ನಾಟಕ ಸರ್ಕಾರದ ವತಿಯಿಂದಲೇ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಪ್ರವೇಶಕ್ಕಾಗಿ ನಡೆಯುವ ಸಿಇಟಿಯನ್ನೇ ಮುಂದುವರಿಸುವ ನಿರ್ಣಯಕ್ಕೆ ವಿಧಾನಪರಿಷತ್ನಲ್ಲೂ ಅಂಗೀಕಾರ ಸಿಕ್ಕಿದೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿರ್ಣಯವನ್ನು ಮಂಡಿಸಿದರು. ಪ್ರತಿಪಕ್ಷಗಳು ವಿರೋಧದ ನಡುವೆಯೂ ಸಭಾಪತಿ ಬಸವರಾಜ ಹೊರಟ್ಟಿಯವರು ನಿರ್ಣಯ ಅಂಗೀಕಾರವಾಗಿದೆ ಎಂದು ಘೋಷಣೆ ಮಾಡಿದರು.
ಇದಕ್ಕೂ ಮುನ್ನ ನಿರ್ಣಯದ ಮೇಲೆ ಮಾತನಾಡಿದ ಶಿವಕುಮಾರ್ ಅವರು, ಇತ್ತೀಚೆಗೆ ದೇಶಾದ್ಯಂತ ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ಸಾಕಷ್ಟು ಲೋಪದೋಷಗಳು ಉಂಟಾಗಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನಲೆಯಲ್ಲಿ ನೀಟ್ನಿಂದ ವಿನಾಯ್ತಿ ನೀಡಿ ಕರ್ನಾಟಕ ಸರ್ಕಾರ ಪ್ರತಿ ವರ್ಷ ವೈದ್ಯಕೀಯ ಕಾಲೇಜುಗಳ ಪ್ರವೇಶಾತಿಗೆ ನಡೆಯುವ ಸಿಇಟಿಯನ್ನು ಮುಂದುವರೆಸಲು ಅನುವು ಮಾಡಿಕೊಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.
ಇನ್ಮುಂದೆ ನಿಮ್ಮ ಭೂಮಿಗೂ ಸಿಗುತ್ತೆ ʻಆಧಾರ್ʼ : ʻಭೂ ಆಧಾರ್ʼ ಕುರಿತು ಇಲ್ಲಿದೆ ಮಾಹಿತಿ | Bhu Aadhar yojana
BIG NEWS: ಆ.1ರಿಂದ ‘ಆರೋಗ್ಯ ಇಲಾಖೆ’ಯ ನೌಕರರು ‘ರಿಯಲ್ ಟೈಮ್ ಅಟೆಂಡೆನ್ಸ್ ಸಿಸ್ಟಮ್ ಹಾಜರಾತಿ’ ದಾಖಲು ಕಡ್ಡಾಯ