ಬೆಂಗಳೂರು: ಮುಡಾ ಅಕ್ರಮ ಕುರಿತಂತೆ ಚರ್ಚೆ ನಡೆಸಲು ಸದನದಲ್ಲಿ ಅವಕಾಶ ನೀಡದಿದ್ದಕ್ಕೇ ಬಿಜೆಪಿ, ಜೆಡಿಎಸ್ ಸದಸ್ಯರಿಂದ ಸದನದಲ್ಲೇ ಅಹೋರಾತ್ರಿ ಧರಣಿ ನಡೆಸಿದ್ದರು. ಈ ಬಳಿಕ ಇಂದು ರಾಜ್ಯಪಾಲರನ್ನು ಭೇಟಿಯಾಗಿ ಮುಡಾ ಅಕ್ರಮದ ಬಗ್ಗೆ ವಿರೋಧ ಪಕ್ಷಗಳಿಂದ ದೂರು ನೀಡಲಾಗಿದೆ.
ಇಂದು ವಿಧಾನಸೌಧದಿಂದ ಪಾದಯಾತ್ರೆಯ ಮೂಲಕ ಸಾಗಿದಂತ ಬಿಜೆಪಿಯ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರು, ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದಂತ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮುಡಾ ಅಕ್ರಮದ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದರು. ಅಲ್ಲದೇ ಈ ಅಕ್ರಮದ ಬಗ್ಗೆ ಸೂಕ್ತ ಸೂಚನೆ ನೀಡುವಂತೆ ರಾಜ್ಯಪಾಲರನ್ನು ಕೋರಿದರು.
ಒಟ್ಟಾರೆಯಾಗಿ ರಾಜ್ಯದ ಕಾಂಗ್ರೆಸ್ ಸರಕಾರವು ಇಂದು ಸದನದಲ್ಲಿ ಮುಡಾ ವಿಚಾರದಲ್ಲಿ ಅವಕಾಶ ನೀಡದೆ ಇರುವುದನ್ನು ಖಂಡಿಸಿ ಬಿಜೆಪಿ-ಜೆಡಿಎಸ್ ಜನಪ್ರತಿನಿಧಿಗಳುÀ ರಾಜಭವನ ಚಲೋ ನಡೆಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ- ಜೆಡಿಎಸ್ ಪ್ರಮುಖರು ರಾಜಭವನಕ್ಕೆ ಕಾಲ್ನಡಿಗೆಯಲ್ಲಿ ಭಾಗವಹಿಸಿದ್ದರು.
ರಾಜ್ಯದ 14 ಜಿಲ್ಲೆಗಳಲ್ಲಿ ‘ಪೈಲಟ್ ಯೋಜನೆ’ ಅನುಷ್ಠಾನ: 1,199 ಗ್ರಾಮ ಪಂಚಾಯ್ತಿಗಳು ಕೊಳಚೆ ನೀರಿನಿಂದ ಮುಕ್ತ
ಇನ್ಮುಂದೆ ನಿಮ್ಮ ಭೂಮಿಗೂ ಸಿಗುತ್ತೆ ʻಆಧಾರ್ʼ : ʻಭೂ ಆಧಾರ್ʼ ಕುರಿತು ಇಲ್ಲಿದೆ ಮಾಹಿತಿ | Bhu Aadhar yojana