ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನ ಸರ್ ಎಂ. ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ಮಧ್ಯೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ದಕ್ಷಿಣ ಮಧ್ಯ ರೈಲ್ವೆಯು ಸೂಚಿಸಿದೆ.
ಯಾದಗಿರಿಯಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಆಗಮನ / ನಿರ್ಗಮನದ ವೇಳಾಪಟ್ಟಿ ಈ ಕೆಳಗಿನಂತಿವೆ:
1. ಜುಲೈ 27 ರಿಂದ ಜಾರಿಗೆ ಬರುವಂತೆ, ರೈಲು ಸಂಖ್ಯೆ 22232 ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಯಾದಗಿರಿ ನಿಲ್ದಾಣಕ್ಕೆ ರಾತ್ರಿ 9:44 ಗಂಟೆಗೆ ಆಗಮಿಸಿ, 9:45 ಕ್ಕೆ ಹೊರಡಲಿದೆ.
2. ಜುಲೈ 28 ರಿಂದ ಜಾರಿಗೆ ಬರುವಂತೆ, ರೈಲು ಸಂಖ್ಯೆ 22231 ಕಲಬುರಗಿ-ಎಸ್ಎಂವಿಟಿ ಬೆಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಯಾದಗಿರಿ ನಿಲ್ದಾಣಕ್ಕೆ ಬೆಳಿಗ್ಗೆ 5:54 ಕ್ಕೆ ಬಂದು, 5:55 ಕ್ಕೆ ಹೊರಡಲಿದೆ.
ಈ ಹೆಚ್ಚುವರಿ ನಿಲುಗಡೆಯು ಯಾದಗಿರಿಗೆ ಮತ್ತು ಅಲ್ಲಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಹೆಚ್ಚಿನ ನಮ್ಯತೆ ಮತ್ತು ಅನುಕೂಲವನ್ನು ಒದಗಿಸಲಿದೆ.
ರಾಜ್ಯದ ಮುಖ್ಯಮಂತ್ರಿ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ
ಇನ್ಮುಂದೆ ನಿಮ್ಮ ಭೂಮಿಗೂ ಸಿಗುತ್ತೆ ʻಆಧಾರ್ʼ : ʻಭೂ ಆಧಾರ್ʼ ಕುರಿತು ಇಲ್ಲಿದೆ ಮಾಹಿತಿ | Bhu Aadhar yojana