ಬೆಂಗಳೂರು : ಮೂರೂವರೆ ವರ್ಷಗಳ ಬಳಿಕ ತುಮಕೂರು ರಸ್ತೆಯ ಪೀಣ್ಯ ಮೇತುವೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಿರುವ ಸಂಚಾರ ವಿಭಾಗದ ಪೊಲೀಸರು, ಜು.29ರಂದು ಸೋಮವಾರ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ.
ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೇಲ್ಲೇತುವೆಗೆ ದುರಸ್ತಿ ಕಾಮಗಾರಿಯನ್ನು ರಾಷ್ಟ್ರೀಯ ಹೆದ್ದಾರಿ ಆರಂಭಿಸಿತ್ತು. ಈ ದುರಸ್ತಿ ಕಾರಣಕ್ಕೆ 2021ರ ಡಿಸೆಂಬರ್ ನಲ್ಲೇ ಮೇಲೇತುವೆಯಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ನಿರ್ಬಂಧಿಸಿದ್ದ ಪೊಲೀಸರು, ಕಾಮಗಾರಿ ಒಂದು ಹಂತ ಮುಗಿದ ಬಳಿಕ 2022ರ ಫೆ.27 ರಂದು ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಿ ಆದೇಶಿಸಿದ್ದರು. ಈಗ ಕಾಮಗಾರಿ ಭಾಗಶಃ ಮುಕ್ತಾಯವಾದ ಹಿನ್ನೆಲೆಯಲ್ಲಿ ಎಲ್ಲ ವಾಹನಗಳ ಓಡಾಟಕ್ಕೆ ಅವಕಾಶ ಸಿಕ್ಕಿದೆ.
ಮೇಲೇತುವೆಯಲ್ಲಿ ಬಸ್ಗಳು ಸೇರಿದಂತೆ ಭಾರಿ ವಾಹನಗಳ ಓಡಾಟಕ್ಕೂ ಅವಕಾಶ ನೀಡುವಂತೆ ಎನ್ಎಚ್ಎ ಹಾಗೂ ಪೊಲೀಸರಿಗೆ ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರಿಂದ ಮನವಿಗಳು ಸಲ್ಲಿಕೆಯಾಗಿದ್ದವು. ಈ ಮನವಿಗೆ ಕೊನೆಗೂ ಸ್ಪಂದಿಸಿದ ಪೊಲೀಸರು, 2.290 ಸೋಮವಾರ ಬೆಳಗ್ಗೆಯಿಂದ ಮೇಲೇತುವೆ ಯಲ್ಲಿ ಎಲ್ಲ ವಾಹನಗಳ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.