ಬೆಂಗಳೂರು : ಉಪನ್ಯಾಸಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 824 ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಪಿಯು ಇಲಾಖೆಯ ಪ್ರಸ್ತಾವನೆ ಸಿದ್ಧ ಪಡಿಸಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ 824 ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಪಿಯು ಇಲಾಖೆಯ ಪ್ರಸ್ತಾವನೆ ಸಿದ್ಧ ಪಡಿಸಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದ್ದಾರೆ.
ಒಟ್ಟಾರೆ 4,259 ಹುದ್ದೆಗಳು ಭರ್ತಿಯಾಗಬೇಕಿದ್ದು, ಸದ್ಯ 814 ಹುದ್ದೆಗಳ ನೇಮಕಾತಿಗೆ ಗುರುತಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 36 ಹಾಗೂ ಕಲ್ಯಾಣ ಕರ್ನಾಟಕೇತರ ಜಿಲ್ಲೆಗಳಲ್ಲಿ 776 ಹುದ್ದೆಗಳನ್ನು ಗುರುತಿಸಲಾಗಿದೆ. ಪ್ರಸ್ತಾವನೆಗೆ ಸಂಪುಟ ಅನುಮೋದನೆ ದೊರೆತು, ಆರ್ಥಿಕ ಇಲಾಖೆ ಹಸಿರು ನಿಶಾನೆ ನೀಡಿದ ಬಳಿಕ ಅಧಿಸೂಚನೆ ಹೊರಬೀಳಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.