ನವದೆಹಲಿ: ಕನ್ವರ್ ಯಾತ್ರಾ ಮಾರ್ಗದಲ್ಲಿನ ಅಂಗಡಿಗಳು ಮತ್ತು ತಿನಿಸುಗಳ ನಾಮಫಲಕ ವಿವಾದವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಿಚಾರಣೆ ನಡೆಸಿತು. “ಶಿವಭಕ್ತ ಕನ್ವಾರಿಯಾಗಳ ಆಹಾರ ಆಯ್ಕೆಗಳನ್ನು ಸಹ ನಾವು ಗೌರವಿಸಬೇಕು” ಎಂದು ನ್ಯಾಯಪೀಠ ಹೇಳಿದೆ.
ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್.ವಿ.ಎನ್.ಭಟ್ಟಿ ಅವರನ್ನೊಳಗೊಂಡ ನ್ಯಾಯಪೀಠ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.
“ಯಾರಾದರೂ ತಮ್ಮ ಸ್ವಂತ ಇಚ್ಛೆಯಿಂದ ಅಂಗಡಿಯ ಹೊರಗೆ ತಮ್ಮ ಹೆಸರನ್ನು ಬರೆಯಲು ಬಯಸಿದರೆ, ನಾವು ಅವರನ್ನು ನಿಲ್ಲಿಸಿಲ್ಲ ಎಂದು ನಮ್ಮ ಆದೇಶ ಸ್ಪಷ್ಟವಾಗಿದೆ. ಹೆಸರುಗಳನ್ನು ಬರೆಯುವಂತೆ ಯಾರನ್ನೂ ಒತ್ತಾಯಿಸಬಾರದು ಆಂತ ಹೇಳಿದೆ.
ಕನ್ವರ್ ಯಾತ್ರಾ ಮಾರ್ಗದಲ್ಲಿನ ಅಂಗಡಿಗಳಿಗೆ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವ ಉತ್ತರ ಪ್ರದೇಶ ಸರ್ಕಾರದ ಆದೇಶಕ್ಕೆ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಮಧ್ಯಪ್ರದೇಶ ಮತ್ತು ಉತ್ತರಾಖಂಡದ ಪರವಾಗಿ ಪ್ರತಿ ಅಫಿಡವಿಟ್ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪ್ರಕರಣದ ಮುಂದಿನ ವಿಚಾರಣೆ ಸೋಮವಾರ ನಡೆಯಲಿದೆ.