ಬೆಂಗಳೂರು : ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಹೀಗಿವೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
* ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಅನುಮೋದನೆ
* ಉಪನ್ಯಾಸಕ ವೃಂದದ ನೇರ ನೇಮಕಾತಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಮಾತ್ರ ಕನಿಷ್ಠ ಶೇ.50 ರಷ್ಟು ಅಂಕಗಳನ್ನು ನಿಗದಿಪಡಿಸಲು ಒಪ್ಪಿಗೆ
* ಕರ್ನಾಟಕ ಕೌಶಲಾಭಿವೃದ್ಧಿ ನಿಗಮವನ್ನು ಕಂಪನಿ ಕಾಯ್ದೆ 2013ರ ಅನ್ವಯ ಸ್ಥಾಪಿಸಲು ನಿರ್ಣಯ
* 105 ಕೋಟಿ ರೂ. ವೆಚ್ಚದಲ್ಲಿ 15 ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ
* 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ 2023-24ನೇ ಸಾಲಿನಲ್ಲೂ ಅರ್ಜಿ ಸಲ್ಲಿಸಲು ಒಂದು ಬಾರಿಗೆ ವಯೋಮಿತಿ ನಿರ್ಬಂಧವನ್ನು ಸಡಿಲಿಸಿ ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡುವ ಪ್ರಸ್ತಾವನೆಗೆ ಅನುಮೋದನೆ
* ಲೋಕ ಶಿಕ್ಷಣ ಟ್ರಸ್ಟ್ ಧಾರವಾಡದ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ ಕೌಶಲಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಲು 2.64 ಎಕರೆ ಜಮೀನನ್ನು ಹಂಚಿಕೆ ಮಾಡುವ ಪ್ರಸ್ತಾವನೆಗೆ ಅನುಮೋದನೆ
* ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ನ ಕೆಳಭಾಗದಲ್ಲಿರುವ 198 ಎಕರೆ ಜಾಗದಲ್ಲಿ ಉದ್ಯಾನವನ ಸೌಂದರ್ಯೀಕರಣ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿಯನ್ನು ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕೈಗೊಳ್ಳಲು ಟೆಂಡರ್ ಕರೆಯುವ ಪ್ರಸ್ತಾವನೆಗೆ ಅನುಮೋದನೆ
* ಕೃಷ್ಣರಾಜಸಾಗರ ಅಣೆಕಟ್ಟಿನ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆಗೆ ಉನ್ನತೀಕರಣಗೊಳಿಸುವ ಕಾಮಗಾರಿಗಳ ವಿಸ್ಕೃತ ಯೋಜನಾ ವರದಿಯನ್ನು ಸಾರ್ವಜನಿಕ – ಖಾಸಗಿ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲು ತೀರ್ಮಾನ
* ಪದವಿ ಪೂರ್ವ ಕಾಲೇಜು ಉಪನ್ಯಾಸಕರುಗಳ ಹುದ್ದೆಗೆ ಬಡ್ತಿ ಹೊಂದಲು ಪ್ರೌಢಶಾಲಾ ಶಿಕ್ಷಕರಿಗೆ ಸ್ನಾತಕೋತ್ತರ ಪದವಿಯಲ್ಲಿ ಶೇ.55 ರಷ್ಟು ಅಂಕಗಳನ್ನು ನಿಗದಿಪಡಿಸಿರುವುದನ್ನು ಪರಿಷ್ಕರಿಸಿ ಕನಿಷ್ಠ ಶೇ.50 ರಷ್ಟು ಅಂಕಗಳನ್ನು ನಿಗದಿಪಡಿಸಲು ಒಪ್ಪಿಗೆ
* ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಥವಾ ಕೇಂದ್ರಿಕೃತ ದಾಖಲಾತಿ ಘಟಕ ಅಥವಾ ಕರ್ನಾಟಕ ಲೋಕಸೇವಾ ಆಯೋಗಗಳನ್ನು ಉಪನ್ಯಾಸಕರ ವೃಂದದ ಆಯ್ಕೆ ಪ್ರಾಧಿಕಾರವೆಂದು ನಿಗದಿಪಡಿಸಲು ಒಪ್ಪಿಗೆ