ಮಂಡ್ಯ : KRSನಿಂದ 1.22 ಲಕ್ಷ ಕ್ಯೂಸೆಕ್ ಕಾವೇರಿ ನದಿಗೆ ನೀರು ಬಿಡುಗಡೆ ಹಿನ್ನಲೆ. ಪ್ರವಾಹ ಮುನ್ನೆಚ್ಚರಿಕೆ ಕ್ರಮವಾಗಿ ಮುತ್ತತ್ತಿಗೆ ಪ್ರವಾಸಿಗರಿಗೆ ಭೇಟಿಗೆ ನಿಷೇಧ ಹೇರಿ ಆದೇಶ ಹೊರಡಿಸಲಾಗಿದೆ.
ಮುತ್ತತ್ತಿಗೆ ನಿಷೇಧಾಜ್ಞೆ ಜಾರಿ ಮಾಡಿ ಮಳವಳ್ಳಿ ತಹಶೀಲ್ದಾರ್ ಕೆ.ಎನ್ ಲೋಕೇಶ್ ಆದೇಶ ಹೊರಡಿಸಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ. ಕಾವೇರಿ ನದಿಯಲ್ಲಿ ನೀರಿಕ್ಷೇಗು ಮೀರಿ ನೀರಿನ ಪ್ರಮಾಣ ಹರಿಯುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧ. ಪ್ರವಾಹ ಕಡಿಮೆಯಾಗುವವರೆಗೆ ನಿಷೇಧ ಜಾರಿ ಮಾಡಲಾಗಿದೆ. ಪೊಲೀಸರು ಕಾವೇರಿ ನದಿ ದಡದಲ್ಲಿ ಅಪಾಯದ ಸೂಚನಾ ಫಲಕ ಹಾಕಿದ್ದು, ನೆನ್ನೆ ಸಂಜೆ 6 ಗಂಟೆಯಿಂದ ಮುಂದಿನ ಆದೇದ ವರೆಗೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕು ಹಲಗೂರು ಹೋಬಳಿ ಯಲ್ಲಿರುವ ಮುತ್ತತ್ತಿ ಗ್ರಾಮವು ಪ್ರಸಿದ್ಧ ಯಾತ್ರಾ ಹಾಗೂ ಪ್ರೇಕ್ಷಣೀಯ ಸ್ಥಳವಾಗಿದ್ದು, ಗ್ರಾಮದ ಪಕ್ಕದಲ್ಲಿ ಕಾವೇರಿ ನದಿ ಹರಿಯುತ್ತಿದ್ದು, ದೇವಸ್ಥಾನಕ್ಕೆ ಬರುವ ಪ್ರವಾಸಿಗರು ನದಿಯೊಳಗೆ ಇಳಿದು ಈಜಾಡುವುದು, ಮೋಜು, ಮಸ್ತಿ ಮಾಡುವುದು ಮಾಡುತ್ತಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ನೈಸರ್ಗಿಕವಾಗಿ ಹೆಚ್ಚು ಮಳೆಯಾಗಿರುವುದರಿಂದ ನದಿಯಲ್ಲಿ ಕಾವೇರಿ ನೀರಿನ ಪ್ರವಾಹ ಹೆಚ್ಚಾಗಿರುತ್ತದೆ. ಅದಲ್ಲದೆ ಕಾವೇರಿ ಜಲಾಶಯದಿಂದ ಹೆಚ್ಚುವರಿಯಾಗಿ 115000 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಿದ್ದು, ಮುತ್ತತ್ತಿಯಲ್ಲಿ ಕಾವೇರಿ ನೀರಿನ ಪ್ರಮಾಣ ಹೆಚ್ಚಾಗಿದ್ದು ಈ ಸಮಯದಲ್ಲಿ ಸಾರ್ವಜನಿಕರು ನದಿಯೊಳಗೆ ಇಳಿಯುವುದರಿಂದ ನದಿ ನೀರಿನ ಪ್ರವಾಹಕ್ಕೆ ಸಿಲುಕಿ ಅಪಘಾತ ಉಂಟಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮುತ್ತತ್ತಿ ಪ್ರವಾಸಿ ತಾಣ, ಭೀಮೇಶ್ವರಿ ಹಾಗೂ ಸುತ್ತ-ಮುತ್ತಲಿನ ಅರಣ್ಯ ಪ್ರದೇಶ ವ್ಯಾಪ್ತಿಗೆ ಪ್ರವಾಹ ಕಡಿಮೆಯಾಗುವವರೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲು ನಿಷೇದಾಜ್ಞೆ ಜಾರಿಗೊಳಿಸಬೇಕೆಂದು ಉಲ್ಲೇಖ (1) ಮತ್ತು (2) ರ ಪತ್ರಗಳಲ್ಲಿ ಆರಕ್ಷಕ ಉಪ ನಿರೀಕ್ಷಕರು, ಹಲಗೂರು ಪೊಲೀಸ್ ಠಾಣೆ, ಹಲಗೂರು ಹಾಗೂ ವಲಯ ಅರಣ್ಯಾಧಿಕಾರಿ ವನ್ಯ ಜೀವಿ ವಲಯ ಹಲಗೂರು ರವರು ಕೋರಿರುತ್ತಾರೆ. ಸದರಿ ಕೋರಿಕೆಗಳನ್ನು ಪರಿಗಣಿಸಿ ಪ್ರವಾಸಿಗರ ಸುರಕ್ಷತಾ ದೃಷ್ಟಿಯಿಂದ ಮುತ್ತತ್ತಿ ಗ್ರಾಮ, ಭೀಮೇಶ್ವರಿ ಹಾಗೂ ಸುತ್ತ-ಮತ್ತಲಿನ ಅರಣ್ಯ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಭಂಧಿಸಿ ನಿಷೇದಾಜ್ಞೆ, ಜಾರಿಗೊಳಿಸುವುದು ನನಗೆ ಮನವರಿಕೆ ಆಗಿರುವುದರಿಂದ ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿದೆ.